ಮೆಗಾಸ್ಟಾರ್ ಚಿರಂಜೀವಿಗೆ ನಾಯಕಿಯಾದ್ರ ರಾಧಿಕ ಕುಮಾರಸ್ವಾಮಿ..!?

ರಾಧಿಕಾ ಕುಮಾರಸ್ವಾಮಿ ಇತ್ತಿಚಿಗೆ ಸ್ಯಾಂಡಲ್ ವುಡ್ ನಲ್ಲಿ ಕಾಣಿಸಿಕೊಳ್ಳುತ್ತಿರುವುದು ಆಗೊಂದು ಸಿನಿಮಾ ಈಗೊಂದು ಸಿನಿಮಾವಷ್ಟೆ. ಆದರೆ ಇದೀಗ ಸ್ಯಾಂಡಲ್ ವುಡ್ ನ ನಟಿ ರಾಧಿಕಾ ಕುಮಾರಸ್ವಾಮಿ ಟಾಲಿವುಡ್ ನ ಸ್ಟಾರ್ ನಟರೊಬ್ಬರ ಜೊತೆ ನಟಿಸುವ ಅವಕಾಶವನ್ನು ಪಡೆದುಕೊಂಡಿದ್ದಾರಂತೆ.
ಈ ಹಿಂದೆ ಸ್ಯಾಂಡಲ್ ವುಡ್ ನಲ್ಲಿ ಮಿಂಚಿ ಮರೆಯಾದ ನಟಿ ರಾಧಿಕಾ ಕುಮಾರಸ್ವಾಮಿ ಮದುವೆಯಾಗಿ ಒಂದು ಮಗುವಿನ ತಾಯಿಯಾದ ನಂತರ ಮತ್ತೆ ಸ್ಯಾಂಡಲ್ ವುಡ್ ಗೆ ರೀ ಎಂಟ್ರಿ ಕೊಟ್ಟಿದ್ದರು.. ಇವರು ಸಿನಿಮಾ ರಂಗದಲ್ಲಿ ಮೊದಲಿನಷ್ಟು ಸಕ್ರೀಯರಾಗಿಲ್ಲವಾದರೂ ಕೂಡ ಸದ್ಯಕ್ಕೆ ಕನ್ನಡದಲ್ಲಿ ಕೆಲವೊಂದು ಸಿನಿಮಾಗಳಲ್ಲಿ ಕನ್ನಡದ ಸ್ಟಾರ್ ನಟರ ಜೊತೆ ಅಭಿನಯ ಮಾಡುತ್ತಿದ್ದರು.ಇದೀಗ ರಾಧಿಕ ಕುಮಾರ ಸ್ವಾಮಿ ತೆಲುಗಿನ ಸ್ಟಾರ್ ನಟ ಮೆಗಾಸ್ಟಾರ್ ಚಿರಂಜೀವಿ ಅವರ 152 ಸಿನಿಮಾಗೆ ನಾಯಕಿಯಾಗಿ ಆಯ್ಕೆ ಆಗಿದ್ದಾರಂತೆ. ತೆಲುಗಿನ ಸ್ಟಾರ್ ಡೈರೆಕ್ಟರ್ ಆದ ಕೊರಟಾಲಶಿ ನಿರ್ದೇಶಿಸುತ್ತಿರುವ ಈ ಸಿನಿಮಾದಲ್ಲಿ ಚಿರಂಜೀವಿ ಅವರಿಗೆ ನಾಯಕಿಯಾಗಿ ರಾಧಿಕಾ ಅಭಿನಯಿಸಲಿದ್ದಾರಂತೆ.. ಸದ್ಯದಲ್ಲೇ ಈ ಚಿತ್ರ ಸೆಟ್ಟೇರಲಿದೆಯಂತೆ ಎಂದಿದ್ದಾರೆ.
Comments