ಗೋಲ್ಡನ್ ಸ್ಟಾರ್ ಗಣೇಶ್ ತಂದೆ ಇನ್ನಿಲ್ಲ

ಸ್ಯಾಂಡಲ್ ವುಡ್ ನ ಗೋಲ್ಡನ್ ಸ್ಟಾರ್ ಗಣೇಶ್ ಅವರ ತಂದೆ ಸಾಕಷ್ಟು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅನಾರೋಗ್ಯದ ನಿಮಿತ್ತ ಅವರನ್ನು ಬಿಜಿಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ನಿಧನರಾಗಿದ್ದಾರೆ.
ಗೋಲ್ಡನ್ ಸ್ಟಾರ್ ಗಣೇಶ್ ಅವರ ತಂದೆ ರಾಮಕೃಷ್ಣಪ್ಪ ಅವರು ಅನಾರೋಗ್ಯದ ಕಾರಣದಿಂದಾಗಿ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸಾಕಷ್ಟು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದಂತಹ ರಾಮಕೃಷ್ಣಪ್ಪ (82) ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಅಡಕಮಾರನಹಳ್ಳಿಯವರಾದ ಗೋಲ್ಡನ್ ಸ್ಟಾರ್ ಕುಟುಂಬದವರು ಅಲ್ಲಿಯೇ ಮೃತರ ಅಂತ್ಯಕ್ರಿಯೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.
Comments