'ಅಂಬಿ ನಿಂಗ್ ವಯಸ್ಸಾಯ್ತೋ' ಚಿತ್ರದಲ್ಲಿ ಕಿಚ್ಚ ಸುದೀಪ್ ನ ಲುಕ್ ರಿವಿಲ್
ಸ್ಯಾಂಡಲ್ ವುಡ್ನ ಬಹು ನಿರೀಕ್ಷಿತ ಚಿತ್ರವಾದ 'ಅಂಬಿ ನಿಂಗ್ ವಯಸ್ಸಾಯ್ತೋ' ತೆರೆಗೆ ಬರಲು ಸಜ್ಜಾಗಿದೆ. ರೆಬೆಲ್ ಸ್ಟಾರ್ ಅಂಬರೀಶ್ ನಾಯಕ ನಟನಾಗಿ ಕಾಣಿಸಿಕೊಂಡು ತೆರೆಗೆ ಬರುತ್ತಿರುವ ವಿಭಿನ್ನ ಶೀರ್ಷಿಕೆಯ 'ಅಂಬಿ ನಿಂಗ್ ವಯಸ್ಸಾಯ್ತೋ' ಚಿತ್ರ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿತ್ತು. ಇದೀಗ ಈ ಚಿತ್ರ ಇದೇ ತಿಂಗಳ 27 ರಂದು ಸಿನಿಮಾ ಬಿಡುಗಡೆಯಾಗುತ್ತಿದೆ.
ಈ ಚಿತ್ರದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮಂಡ್ಯದ ಹುಡುಗನಾಗಿ ಕಾಣಿಸಿಕೊಂಡಿದ್ದು, ಕಣ್ಣಿಗೆ ಕೂಲಿಂಗ್ ಗ್ಲಾಸ್. ತೊಗಳೆ ಶರ್ಟ್, ಹಣೆಯಲ್ಲಿ ವಿಭೂತಿ ಧರಿಸಿ ವಿಭಿನ್ನ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಇದೀಗ ಸಿನಿಮಾದ ಲುಕ್ ಬಿಡುಗಡೆಯಾಗಿದೆ. ಇದೇ ಮೊದಲ ಬಾರಿಗೆ ಗುರುದತ್ ಗಾಣಿಗ ಆಕ್ಷನ್ ಕಟ್ ಹೇಳುತ್ತಿರುವ ಈ ಸಿನಿಮಾ ತಮಿಳಿನ ಹಿಟ್ ಚಿತ್ರ 'ಪವರ್ ಪಾಂಡಿ' ಚಿತ್ರದ ರೀಮೇಕ್ ಆಗಿದೆ ಶ್ರುತಿ ಹರಿಹರನ್ ಸೇರಿದಂತೆ ಮುಂತಾದ ತಾರಾಬಳಗವಿದೆ. ಈ ಸಿನಿಮಾ ತೆರೆ ಮೇಲೆ ಯಾವ ರೀತಿ ಮೂಡಿಬರುತ್ತದೆ ಎನ್ನುವುದನ್ನ ಕಾದುನೋಡಬೇಕಿದೆ.
Comments