ಕೆಜಿಎಫ್‌ನಿಂದ ಗುಡ್ ನ್ಯೂಸ್..! ಯಶ್ ನ್ಯೂ ಲುಕ್ ರಿವಿಲ್..!!

ಸ್ಯಾಂಡಲ್ ವುಡ್ ನ ಬಹು ನಿರೀಕ್ಷಿತ ಚಿತ್ರವಾದ ಕೆಜಿಎಫ್ ಚಿತ್ರ ಬಿಡುಗಡೆಗೆ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದೆ. ರಾಕಿಂಗ್ ಸ್ಟಾರ್ ಅಭಿಮಾನಿಗಳು ಸಿನಿಮಾಗಾಗಿ ಕಾಯುತ್ತಿದ್ದಾರೆ. ಸ್ಯಾಂಡಲ್ ವುಡ್ ನಲ್ಲಿ ಸಾಕಷ್ಟು ಕುತೂಹಲ ಕೆರಳಿಸಿರುವ ಚಿತ್ರ ಇದಾಗಿದ್ದು ಹೈ ಬಜೆಟ್ ಮೂವೀ ಕೂಡ ಆಗಿದೆ.
ರಾಕಿಂಗ್ ಸ್ಟಾರ್ ಯಶ್ ಅವರ ಬಹು ನಿರೀಕ್ಷಿತ ಚಿತ್ರ ಕೆಜಿಎಫ್ ಬಿಡುಗಡೆಗೆ ಸಿದ್ಧವಾಗಿದೆ. ಒಂದೇ ಸಮಯಕ್ಕೆ ಕನ್ನಡ, ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಕನ್ನಡ ಚಿತ್ರವೊಂದು ಪಂಚಭಾಷೆಗಳಲ್ಲಿ ರಿಲೀಸ್ ಆಗುವ ಹೆಮ್ಮೆ ಈ ಚಿತ್ರದಾಗಿದೆ. ಈ ಚಿತ್ರದ ಬಗ್ಗೆ ಸಾಕಷ್ಟು ಕ್ಯೂರಾಸಿಟಿ ಇತ್ತು.. ಇದೀಗ ಹೊಸ ಪೋಸ್ಟರ್ ಕ್ಯೂರಾಸಿಟಿಗೆ ತೆರೆ ಎಳೆದಿದೆ. ಚಿತ್ರದ ಟ್ರೈಲರ್ ಅಕ್ಟೋಬರ್ 14ಕ್ಕೆ ರಿಲೀಸ್ ಆದರೆ ಚಿತ್ರ ನವೆಂಬರ್ 16ಕ್ಕೆ ರಿಲೀಸ್ ಆಗುವುದು ಬಹುತೇಕ ಖಚಿತವಾಗಿದೆ.
Comments