ನಟ ದರ್ಶನ್ ಕಾರು ಅಪಘಾತ: ಶಸ್ತ್ರಚಿಕಿತ್ಸೆ ಯಶಸ್ವಿ
ಸ್ಯಾಂಡಲ್ ವುಡ್ ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಕಾರು ಮೈಸೂರು ಹೊರವಲಯದ ಹಿನಕಲ್ ಜಂಕ್ಷನ್ ಬಳಿ ಅಪಘಾತಕ್ಕೀಡಾಗಿದ್ದು, ನಟ ದರ್ಶನ್ ಸೇರಿದಂತೆ ನಾಲ್ಕು ಜನರಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ.
ಕಾರು ಅಪಘಾತದಲ್ಲಿ ನಟ ದರ್ಶನ್ ಅವರ ಬಲಗೈ ಮುರಿದುಕೊಂಡಿದ್ದು, ಚಿಕಿತ್ಸೆಗಾಗಿ ದರ್ಶನ್ ಅವರನ್ನು ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಟ ದರ್ಶನ್ ಅವರ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು, ಐಸಿಯುನಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗೂ ದರ್ಶನ್ ತಾಯಿ ಮೀನ ತೂಗುದೀಪ, ನಟ ಸೃಜನ್ ಲೋಕೇಶ್ ಸೇರಿದಂತೆ ಹಲವರು ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ಆಗಮಿಸಿ, ದರ್ಶನ್ ಆರೋಗ್ಯ ವಿಚಾರಿಸಿದ್ದಾರೆ. ಸದ್ಯ ಅಭಿಮಾನಿಗಳು ದರ್ಶನ್ ಅವರು ಬೇಗ ಗುಣಮುಖರಾಗಲಿ ಎಂದು ದೇವರ ಬಳಿ ಬೇಡಿಕೊಂಡಿದ್ದಾರೆ.
Comments