ಅಪಘಾತವಾಗಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾರು ನಾಪತ್ತೆ..!?
ಸ್ಯಾಂಡಲ್ ವುಡ್ ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಕಾರು ಇಂದು ಬೆಳಿಗ್ಗೆ ಸುಮಾರು 3 ಗಂಟೆಯ ವೇಳೆಗೆ ಮೈಸೂರು ಹೊರವಲಯದ ಹಿನಕಲ್ ಜಂಕ್ಷನ್ ಬಳಿ ಅಪಘಾತಕ್ಕೀಡಾಗಿದ್ದು, ನಟ ದರ್ಶನ್ ಸೇರಿದಂತೆ ನಾಲ್ಕು ಜನರಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ.
ಅಪಘಾತವಾದ ದರ್ಶನ್ ಕಾರಿನ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡರೆ ಚಾಲೆಂಜಿಂಗ್ ಸ್ಟಾರ್ ಅಭಿಮಾನಿಗಳಲ್ಲಿ ಆತಂಕ ಜಾಸ್ತಿಯಾಗುತ್ತದೆ ಎಂಬ ಕಾರಣಕ್ಕೆ ಕಾರನ್ನು ನಾಪತ್ತೆ ಮಾಡಲಾಗಿದೆ ಎಂದೂ ಊಹೆ ಮಾಡಲಾಗುತ್ತಿದೆ. ಅಪಘಾತವಾದ ಕಾರು ಪೊಲೀಸರ ವಶದಲ್ಲಿದೆಯೇ ಎಂಬ ಬಗ್ಗೆ ವಿವಿ ಪುರಂ ಪೊಲೀಸರಿಂದ ಯಾವುದೇ ರೀತಿಯ ಮಾಹಿತಿ ಲಭ್ಯವಾಗಿಲ್ಲ. ಕಾರು ಎಲ್ಲಿದೆ ಎಂಬುದರ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ. ಅಪಘಾತವಾದ ಸಮಯದಲ್ಲಿ ದರ್ಶನ್ ಅವರೇ ಕಾರು ಚಲಾಯಿಸುತ್ತಿದ್ದರು ಎಂದು ಹೇಳಲಾಗಿದ್ದು, ಅವರ ಜೊತೆ ಆ ಸಮಯದಲ್ಲಿ ನಟರಾದ ದೇವರಾಜ್, ಪ್ರಜ್ವಲ್ ದೇವರಾಜ್ ಇದ್ದು,ಅವರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ.
Comments