ಅಭಿಮಾನಿಗಳಿಗೆ ಗುಡ್ ನ್ಯೂಸ್ : ನಾಳೆ ನಟ ದರ್ಶನ್ ಆಸ್ಪತ್ರೆಯಿಂದ ಡಿಸ್ಚಾರ್ಜ್

ಇತ್ತಿಚಿಗಷ್ಟೆ ಬೆಳ್ಳಂಬೆಳ್ಳಗೆ ಮೈಸೂರಿನ ಹಿನಕಲ್ ಬಳಿ ನಡೆದ ಕಾರು ಅಪಘಾತದಲ್ಲಿ ಗಾಯಗೊಂಡು ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದು, ನಾಳೆ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಅಪಘಾತದಲ್ಲಿ ದರ್ಶನ್ ಅವರ ಬಲಗೈ ಮೂಳೆ ಮುರಿದ ಕಾರಣ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ನೆರವೇರಿಸಿದ್ದಾರೆ. ಕೈಗೆ ಹಾಕಿರುವ ಬ್ಯಾಂಡೇಜ್ ಬದಲಿಸಬೇಕಿರುವ ಕಾರಣ ಅವರನ್ನು ಆಸ್ಪತ್ರೆಯಲ್ಲೇ ಉಳಿಸಿಕೊಳ್ಳಲಾಗಿದೆ ಎಂಬ ಮಾಹಿತಿಯು ತಿಳಿದು ಬಂದಿದೆ. ನಡೆದ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ನಟ ದೇವರಾಜ್ ಹಾಗೂ ಅವರ ಪುತ್ರ ಪ್ರಜ್ವಲ್ ದೇವರಾಜ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಈಗಾಗಲೇ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.
Comments