ನಟ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ವಿರುದ್ಧ ದೂರು ದಾಖಲು..! ಕಾರಣ ?

ಸ್ಯಾಂಡಲ್ ವುಡ್ ನಟ ಧ್ರುವ ಸರ್ಜಾ ವಿರುದ್ಧ ಬನಶಂಕರಿ ಠಾಣೆಯಲ್ಲಿ ಇದೀಗ ದೂರು ದಾಖಲಾಗಿದೆ. ಹುಟ್ಟುಹಬ್ಬದ ಪ್ರಯುಕ್ತ ಕಟೌಟ್ ಮತ್ತು ಫ್ಲೆಕ್ಸ್ ಗಳನ್ನು ಹಾಕಿದ್ದ ಹಿನ್ನೆಲೆಯಲ್ಲಿ ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ
ಹೈಕೋರ್ಟ್ ಇತ್ತೀಚಿಗೆ ಪಾಲಿಕೆ ವ್ಯಾಪ್ತಿಯಲ್ಲಿ ಫ್ಲೆಕ್ಸ್, ಬ್ಯಾನರ್’ಗಳನ್ನು ನಿಷೇಧಿಸಲಾಗಿದೆ. ಹೀಗಿದ್ದರೂ ಕೂಡ ಫ್ಲೇಕ್ಸ್ ಹಾಕಿರುವುದರಿಂದ ಕಾನೂನು ಉಲ್ಲಂಘನೆ ಆರೋಪದಡಿ ಧ್ರುವ ಸರ್ಜಾ ವಿರುದ್ಧ ಬನಶಂಕರಿ ಠಾಣೆಯಲ್ಲಿ ದೂರು ದಾಖಲಾಗಿದೆ. ಕಟೌಟ್ ನಲ್ಲಿ ಧ್ರುವ ಸರ್ಜಾ ಅವರ ಭಾವಚಿತ್ರ ಇರುವುದರಿಂದ ನಟನ ವಿರುದ್ಧ ಬನಶಂಕರಿ ಎಆರ್’ಒರಿಂದ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಎಫ್ ಐಆರ್ ದಾಖಲಾಗಿದೆ ಎಂದು ಹೇಳಲಾಗುತ್ತಿದೆ.
Comments