ಅರ್ಜುನ್ ಸರ್ಜಾಗೆ ಮತ್ತೆ ಸಂಕಷ್ಟ : ಮತ್ತೊಂದು ದೂರು ದಾಖಲು..!

ಮೀಟೂ ಅಭಿಯಾನವು ಸ್ಯಾಂಡಲ್ ವುಡ್’ನಲ್ಲಿ ದಿನಕ್ಕೊಂದು ತಿರುವನ್ನು ಪಡೆಯುತ್ತಿದೆ. ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ನಟಿ ಶ್ರುತಿ ಹರಿಹರನ್ ಅವರ ಮೇಲಿನ ಲೈಂಗಿಕ ದೌರ್ಜನ್ಯ ವಿಷಯದ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿವೆ. ಅಷ್ಟೆ ಅಲ್ಲದೆ ಅರ್ಜುನ್ ಸರ್ಜಾ ವಿರುದ್ದ ಈಗಾಗಲೇ ದೂರು ಕೂಡ ದಾಖಲಾಗಿದೆ. ಅದೇ ರೀತಿ ಈ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ನಟ ಅರ್ಜುನ್ ಸರ್ಜಾ ವಿರುದ್ಧ ರಾಜ್ಯ ಮಹಿಳಾ ಆಯೋಗ ಸ್ವಯಂ ಪ್ರೇರಿತ ದೂರನ್ನು ದಾಖಲಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ.
ಈ ಪ್ರಕರಣ ಸಂಬಂಧ ಮಾಧ್ಯಮಗಳಲ್ಲಿ ಪ್ರಕಟಗೊಂಡ ವರದಿಯನ್ನು ಆಧರಿಸಿ ಶನಿವಾರ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿದೆವಾಗಿ ಆಯೋಗದ ಅಧ್ಯಕ್ಷೆಯಾದ ನಾಗಲಕ್ಷ್ಮಿ ಬಾಯಿ ಅವರು, ಈ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ ವರದಿ ನೀಡುವಂತೆ ನಗರ ಪೊಲೀಸ್ ಕಮಿಷನರ್ ಟಿ.ಸುನೀಲ್‌ಕುಮಾರ್ ಅವರಿಗೆ ನೋಟಿಸ್ ನೀಡಿದ್ದಾರೆ ಎಂದು ತಿಳಿಸಿದ್ದಾರೆ. 'ಶ್ರುತಿ ಅವರ ಮೇಲೆ ಎಸಗಿದ ಲೈಂಗಿಕ ದೌರ್ಜನ್ಯ ಆರೋಪ ಸಂಬಂಧ ಅರ್ಜುನ್ ಸರ್ಜಾ ವಿರುದ್ಧ ದೂರು ದಾಖಲಿಸಲಾಗಿದೆ. ಈ ವಿಷಯವಾಗಿ ಸ್ಯಾಂಡಲ್’ವುಡ್ನಲ್ಲಿ ದೊಡ್ಡ ಬಿರುಗಾಳಿಯೇ ಎದ್ದಿದೆ. ಸಾಕಷ್ಟು ನಟ ನಟಿಯರು ಪರ ವಿರೋಧದ ಚರ್ಚೆಗೆ ಇಳಿದಿರುವುದಂತೂ ಸುಳ್ಳಲ್ಲ. ಇದು ಎಲ್ಲಿಗೆ ಹೋಗಿ ತಲುಪುತ್ತದೆ ಅನ್ನೋದನ್ನ ಮುಂದಿನ ದಿನಗಳಲ್ಲಿ ಕಾದು ನೋಡಬೇಕಿದೆ.
Comments