ಅರ್ಜುನ್ ಸರ್ಜಾಗೆ ಬಿಗ್ ರಿಲೀಫ್:ಬಂಧನ ಭೀತಿಯಿಂದ ಪಾರಾದ ‘ವಿಸ್ಮಯ’ ನಾಯಕ

ಮೀಟೂ ಆರೋಪವನ್ನು ಎದುರಿಸುತ್ತಿರುವ ಅರ್ಜುನ್ ಸರ್ಜಾ ಅವರ ವಿರುದ್ದ ಲೈಂಗಿಕ ಕಿರುಕುಳಕ್ಕೆ ಸಂಬಂಧಪಟ್ಟಂತೆ ಅರ್ಜುನ್ ಸರ್ಜಾ ಅವರನ್ನು ಬಂಧಿಸದಂತೆ ಹೈಕೋರ್ಟ್ ಮಧ್ಯಂತರ ಆದೇಶವನ್ನು ಹೊರಡಿಸಿದೆ. ನಟಿ ಶ್ರುತಿ ಹರಿಹರನ್ ಅರ್ಜುನ್ ಸರ್ಜಾ ಅವರು ತಮಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಅವರ ವಿರುದ್ಧ ದಾಖಲಿಸಿರುವ ಎಫ್ ಐ ಆರ್ ರದ್ದುಪಡಿಸುವಂತೆ ಕೋರಿ ಅರ್ಜುನ್ ಸರ್ಜಾ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಶುಕ್ರವಾರ ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಮುಂದಿನ ವಿಚಾರಣೆಯನ್ನು ನವೆಂಬರ್ 14 ಕ್ಕೆ ಮುಂದೂಡಿದೆ ಎಂದು ತಿಳಿಸಿದೆ.. ಹಾಗೇ ಇದೇ ವೇಳೆ ಇದು ಮೂರು ವರ್ಷಗಳ ಹಳೆಯ ಪ್ರಕರಣವಾಗಿರುವ ಕಾರಣ ಅರ್ಜುನ್ ಸರ್ಜಾರನ್ನು ಬಂಧಿಸುವ ಅವಶ್ಯಕತೆ ಇಲ್ಲ ಘಟನೆಗೆ ಸಂಬಂಧಪಟ್ಟಂತೆ ತನಿಖೆ ನಡೆಸುವಂತೆ ಸೂಚನೆಯನ್ನು ನೀಡಿದೆ ಎಂದು ಹೇಳಲಾಗಿದೆ. ಈ ಮೀಟೂ ಅಭಿಯಾನ ಸ್ಯಾಂಡಲ್’ವುಡ್ ನಲ್ಲಿ ಸಖತ್ ಸದ್ದು ಮಾಡುತ್ತಿದೆ.
Comments