ರಾಕಿಂಗ್ ಸ್ಟಾರ್ ಅಭಿಮಾನಿಗಳಿಗೆ ಮತ್ತೊಂದು ಗುಡ್ ನ್ಯೂಸ್ ..!!
ಚಂದನವನದಲ್ಲಿ ಬಹು ನಿರೀಕ್ಷಿತ ಚಿತ್ರವಾದ ಕೆಜಿಎಫ್ ಸಿನಿಮಾ ತುಂಬಾ ನಿರೀಕ್ಷೆಗಳನ್ನು ಹುಟ್ಟಿಸಿದೆ.. ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್ ಚಿತ್ರದ ಟ್ರೈಲರ್ ಆಗಲೇ ರಿಲೀಸ್ ಆಗಿದ್ದು, ನಿನ್ನೆ ಅಷ್ಟೆ ಒಂದು ಲಿರಿಕಲ್ ಸಾಂಗ್ ಕೂಡ ಬಿಡುಗಡೆಯಾಗಿದೆ. ಇದೀಗ ಅಭಿಮಾನಿಗಳಿಗೆ ಕೆಜಿಎಫ್ ಚಿತ್ರತಂಡ ಮತ್ತೊಂದು ಸಂತಸದ ಸುದ್ದಿಯನ್ನು ನೀಡಿದೆ.
ಎಸ್… ಕೆಜಿಎಫ್ ಚಿತ್ರದ ಹಿಂದಿ ಅವತರಣಿಕೆಯ 2 ನೇ ಟ್ರೈಲರ್ ಇಂದು ಬಿಡುಗಡೆಯಾಗಲಿದೆ. ಈ ವಿಷಯವಾಗಿ ಬಾಲಿವುಡ್ ನಟ ಫರಾನ್ ಅಕ್ತರ್ ತಮ್ಮ ಟ್ವೀಟರ್ ಖಾತೆಯಲ್ಲಿ ತಿಳಿಸಿದ್ದಾರೆ.. ಕೆಜಿಎಫ್ ಚಿತ್ರದ 2 ನೇ ಟ್ರೈಲರ್ ಬಿಡುಗಡೆ ಆಗಿದೆ ಎಂದು ಬರೆದಿದ್ದಾರೆ. ಪ್ರಶಾಂತ್ ನೀಲ್ ನಿರ್ದೇಶಿಸುತ್ತಿರುವ ಈ ಚಿತ್ರವನ್ನು ಹೊಂಬಾಳೆ ಪ್ರೋಡಕ್ಷನ್ ನ ವಿಜಯ್ ಕಿರಂಗದೂರ್ ನಿರ್ಮಿಸುತ್ತಿದ್ದು, ದಕ್ಷಿಣ ಭಾರತದ ಐದು ಭಾಷೆಗಳಲ್ಲಿ ಕೆಜಿಎಫ್ ಬಿಡುಗಡೆಯಾಗುತ್ತಿದೆ. ಸದ್ಯ ಯಶ್ ರಾಕಿಂಗ್ ಸ್ಟಾರ್ ಮಗಳು ಮನೆಗೆ ಬಂದಿರುವ ಸಂಭ್ರಮದಲ್ಲಿದ್ದಾರೆ…
Comments