ರಿಲೀಸ್ ಆಯ್ತು ರಿಷಬ್ ಶೆಟ್ಟಿ ಅಭಿನಯದ ಬೆಲ್ ಬಾಟಂ ಟೀಸರ್..! ಹೇಗಿದೆ ನೋಡಿ?
ಸ್ಯಾಂಡಲ್ ವುಡ್’ಗೆ ಕಿರಿಕ್ ಪಾರ್ಟಿಯಂತಹ ಒಳ್ಳೆಯ ಸಿನಿಮಾವನ್ನು ನೀಡಿದ ನಿರ್ದೇಶಕ ರಿಷಬ್ ಶೆಟ್ಟಿ ಬೆಲ್ ಬಾಟಂ ಚಿತ್ರದ ಮೂಲಕ ಮೂಲಕ ನಾಯಕನಾಗಿ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡ್ತಿದ್ದಾರೆ..ಇದೀಗ ರಿಷಬ್ ಶೆಟ್ಟಿಯ ಬೆಲ್ ಬಾಟಂ ಚಿತ್ರದ ಟೀಸರ್ ರಿಲೀಸ್ ಆಗಿದೆ.
ಡಿಟೆಕ್ಟಿವ್ ದಿವಾಕರ್ ಪಾತ್ರದಲ್ಲಿ ಬೆಲ್ ಬಾಟಂ ಚಿತ್ರದಲ್ಲಿ ರಿಷಭ್ ಶೆಟ್ಟಿ ಡಿಫರೆಂಟ್ ರೋಲ್ ನಲ್ಲಿ ಕಾಣಿಸಿಕೊಂಡಿದ್ದಾರೆ. ರಿಷಭ್ ಶೆಟ್ಟಿಗೆ ನಾಯಕಿಯಾಗಿ ಹರಿಪ್ರಿಯ ಅಭಿನಯಿಸಿದ್ದಾರೆ. ಬೆಲ್ ಬಾಟಂ ಚಿತ್ರವನ್ನು ಜಯತೀರ್ಥ ನಿರ್ದೇಶನ ಮಾಡಿದ್ದು, ವಿಭಿನ್ನ ಕಥೆಯನ್ನು ಹೊಂದಿದೆ. ಬೆಲ್ ಬಾಲ್ ಬಾಟಂ ಚಿತ್ರದಲ್ಲಿ ರಿಷಭ್ ಶೆಟ್ಟಿ ಡಿಡೆಕ್ಟಿವ್ ದಿವಾಕರನ ಪಾತ್ರ ಮಾಡಿದ್ದಾರೆ. ಇನ್ನೂ ಈ ಚಿತ್ರ ತೆರೆ ಮೇಲೆ ಯಾವ ರೀತಿ ಮೂಡಿ ಬರುತ್ತದೆ ಅನ್ನೋದನ್ನ ಕಾದು ನೋಡಬೇಕಿದೆ.
Comments