`ಮದಗಜ'ನಿಗೆ ಸಾಥ್ ಕೊಡಲಿರುವ 'ಗಜ'..!!
ಉಗ್ರಂ ಖ್ಯಾತಿಯ ರೋರಿಂಗ್ ಸ್ಟಾರ್ ಶ್ರೀಮುರುಳಿ ಇದೇ 17 ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಶ್ರೀಮುರುಳಿ ಈಗಾಗಲೇ ಭರಾಟೆ-ಮದಗಜ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ.ಭರಾಟೆ ಸಿನಿಮಾ ಶೂಟಿಂಗ್ ಭರದಿಂದ ಸಾಗುತ್ತಿದ್ದು, ಮೂರನೇ ಹಂತದ ಚಿತ್ರೀಕರಣ ನಡೆಯುತ್ತಿದೆ. ಡಿ. 17 ರಂದು ಶ್ರೀಮುರುಳಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು, ಈ ಸಂಭ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ಭಾಗವಹಿಸಲಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ರೋರಿಂಗ್ ಸ್ಟಾರ್ ಹುಟ್ಟುಹಬ್ಬದ ದಿನವೇ ಭರಾಟೆ ಸಿನಿಮಾದ ಟೀಸರ್ ಲಾಂಚ್ ಮಾಡಿ ಚಿತ್ರಕ್ಕೆ ಶುಭ ಹಾರೈಕೆಯನ್ನು ಕೋರಲಿದ್ದಾರೆ. ಭರ್ಜರಿ ಚೇತನ್ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ಇನ್ನು ಭರಾಟೆ ಟೀಸರ್ ಲಾಂಚ್ ವೇದಿಕೆಯಲ್ಲಿಯಲ್ಲಿ ಮುರುಳಿ ನಟನೆಯ ಮದಗಜ ಚಿತ್ರದ ಟೈಟಲ್ ಅನ್ನು ದರ್ಶನ್ ಅವರೇ ಲಾಂಚ್ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ.
Comments