ಆರೋಗ್ಯ ಸಮಸ್ಯೆಯಿಂದ ಹಾಸಿಗೆ ಹಿಡಿದ ‘ತಿಥಿ’ ಸಿನಿಮಾ ಖ್ಯಾತಿಯ ಗಡ್ಡಪ್ಪ

28 Dec 2018 12:57 PM | Entertainment
555 Report

ತಿಥಿ ಸಿನಿಮಾ ಎಂದ ತಕ್ಷಣ ಎಲ್ಲರಿಗೂ ಕೂಡ ನೆನಪಾಗೋದು ಗಡ್ಡಪ್ಪ… ಹೌದು ಅಷ್ಟರ ಮಟ್ಟಿಗೆ ಗಡ್ಡಪ್ಪ ಹೆಸರನ್ನು ಮಾಡಿದ್ದರು.. ತಿಥಿ ಸಿನೆಮಾ ಖ್ಯಾತಿಯ ಗಡ್ಡಪ್ಪ ಇದೀಗ ಅನಾರೋಗ್ಯ ಪೀಡಿತರಾಗಿದ್ದು, ಹಾಸಿಗೆ ಹಿಡಿದಿದ್ದಾರೆ.ತಿಥಿ ಸೇರಿದಂತೆ ಇನ್ನೂ ಹಲವು ಸಿನಿಮಾಗಳಲ್ಲಿ ನಟಿಸಿರುವ ಗಡ್ಡಪ್ಪ ಅವರಿಗೆ ನಾಲ್ಕು ದಿನಗಳ ಹಿಂದೆ ಪಾರ್ಶ್ವವಾಯು ಸಮಸ್ಯೆ ಕಾಣಿಸಿಕೊಂಡಿದೆ. ಇದರಿಂದ ಅವರಿಗೆ ಮಾತನಾಡಲೂ ಕೂಡ ಕಷ್ಟ ಆಗಿದೆ ಎಂದು ಹೇಳಲಾಗುತ್ತಿದೆ.ಇದಕ್ಕೂ ಮೊದಲು ಅವರು ಹೃದಯ ಸಮಸ್ಯೆಯಿಂದ ಬಳಲುತ್ತಿದ್ದರು.  ಗಡ್ಡಪ್ಪ ಅವರ ಆರೋಗ್ಯದಲ್ಲಿ ಏರುಪೇರಾದ್ದರಿಂದ ಕುಟುಂಬಸ್ಥರು ತಕ್ಷಣ ಆಸ್ಪತ್ರೆಗೆ ಸೇರಿಸಿದ್ದಾರೆ.

ಸದ್ಯಕ್ಕೆ ಗಡ್ಡಪ್ಪಗೆ ವೈದ್ಯರು ಚಿಕಿತ್ಸೆ ನೀಡಿ ಮನೆಗೆ ಕಳುಹಿಸಿದ್ದಾರೆ. ಗಡ್ಡಪ್ಪಗೆ ಚಿಕಿತ್ಸೆ ನೀಡಿರುವ ವೈದ್ಯರು ಬೆಡ್ ರೆಸ್ಟ್ ತೆಗೆದುಕೊಳ್ಳಲು ತಿಳಿಸಿದ್ದಾರೆ .ತಿಥಿ ಸಿನಿಮಾವನ್ನು ಈರೇಗೌಡ ಕಥೆ ರಚಿಸಿ ರಾಮ್ ರೆಡ್ಡಿ ನಿರ್ದೇಶನ ಮಾಡಿದ್ದರು. ಈ ಸಿನಿಮಾ ಕರ್ನಾಟಕದಲ್ಲಿ ಯಶಸ್ವಿಯಾಗಿ ಪ್ರದರ್ಶನಗೊಂಡಿತ್ತು. ಅಷ್ಟೇ ಅಲ್ಲದೇ 63ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಪ್ರಾದೇಶಿಕ ಚಲನಚಿತ್ರ ವಿಭಾಗ ಪ್ರಶಸ್ತಿಗಳಲ್ಲಿ 'ತಿಥಿ' ಅತ್ಯುತ್ತಮ ಕನ್ನಡ ಚಲನಚಿತ್ರ ಪ್ರಶಸ್ತಿಗೆ ಭಾಜನವಾಗಿತ್ತು. ಆ ವಯಸ್ಸಿನಲ್ಲೂ ಗಡ್ಡಪ್ಪನ ನಟನೆಗೆ ಪ್ರೇಕ್ಷಕ ಫಿದಾ ಆಗಿದ್ದಂತೂ ಸುಳ್ಳಲ್ಲ..

Edited By

Manjula M

Reported By

Manjula M

Comments