ಸಿನಿಮಾ ಶೂಟಿಂಗ್ ವೇಳೆ ಅವಘಡ..!! ಸಿಲಿಂಡರ್ ಬ್ಲಾಸ್ಟ್ ನಿಂದಾಗಿ ಇಬ್ಬರ ಸಾವು..!!

ಬೆಂಗಳೂರಿನ ಬಾಗಲೂರು ಬಳಿ ನಟ ಚಿರಂಜೀವಿ ಸರ್ಜಾ ಅಭಿನಯದ ‘ರಣಂ’ ಸಿನಿಮಾದ ಶೂಟಿಂಗ್ ನಡೆಯುತ್ತಿತ್ತು.. ಶೂಟಿಂಗ್ ನಡೆಯುವ ಸಂದರ್ಭದಲ್ಲಿ ಸಿಲಿಂಡರ್ ಸ್ಪೋಟಗೊಂಡು ಶೂಟಿಂಗ್ ನೋಡಲು ಬಂದಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಆಯಿಷಾ ಖಾನ್ (5), ತಾಯಿ ಸುಯೇರಾ ಬಾನು ಸಾವನ್ನಪ್ಪಿದ ದುರ್ದೈವಿಗಳಾಗಿದ್ದು, ನಗರದ ಬಾಗಲೂರು ಬಳಿ ಚಿತ್ರದ ಚಿತ್ರೀಕರಣ ನಡೆಯುತಿತ್ತು..
ಸುಯೇರಾ ಬಾನು ಅವರು ತಮ್ಮ ಮಗುವಿನೊಂದಿಗೆ ಶೂಟಿಂಗ್ ನೋಡಲು ಬಂದಿದ್ದರು.. ಆ ಸಮಯದಲ್ಲಿ ಈ ಅವಘಡ ಸಂಭವಿಸಿದೆ… ರಣಂ ಚಿತ್ರದ ಸಾಹಸ ದೃಶ್ಯಗಳ ಚಿತ್ರೀಕರಣ ಭಾಗವಾಗಿ ಕಾರನ್ನು ಬ್ಲಾಸ್ಟ್ ಮಾಡುವ ದೃಶ್ಯ ಶೂಟ್ ಮಾಡಲಾಗುತಿತ್ತು. ಈ ವೇಳೆ ಸಿಲಿಂಡರ್ ಸ್ಫೋಟಗೊಂಡಿದ್ದು, ಸ್ಫೋಟದ ತೀವ್ರತೆಗೆ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮತ್ತೊಂದು ಮಗು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭಿಸಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಪೊಲೀಸರು ಮೃತ ದೇಹಗಳನ್ನು ಯಲಹಂಕ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಸಿನಿಮಾ ಚಿತ್ರಿಕರಣ ನೋಡಲು ಬಂದಿದ್ದವರು ಹೆಣವಾಗಿ ಹೋಗಿದ್ದಾರೆ.
Comments