ದರ್ಶನ್ ಸ್ನೇಹಿತ ನಟ ಅನಿಲ್ ಇನ್ನಿಲ್ಲ..!!!
ಅನಾರೋಗ್ಯದಿಂದ ಬಳಲುತ್ತಿದ್ದ ನಟ ಅನಿಲ್ ಅವರು ಇಂದು ವಿಧಿವಶರಾಗಿದ್ದಾರೆ. ಈ ಹಿಂದೆ ನಟ ಅನಿಲ್ ಅವರು ಅನಾರೋಗ್ಯ ನಿಮಿತ್ತ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಹಣವಿಲ್ಲದೇ ಪರದಾಡುತ್ತಿದ್ದ ಇವರು, ದರ್ಶನ್ ಸಹಾಯಕ್ಕೆ ಕಾಯುತ್ತಿದ್ದರು. ಈ ಬಗ್ಗೆ ಮಾಧ್ಯಮಗಳಲ್ಲಿ ದೊಡ್ಡ ಮಟ್ಟದ ಸುದ್ದಿಯಾಗಿತ್ತು. ಮನೆ ನಿರ್ವಹಣೆ ಮಾಡೋದಿಕ್ಕು ಕಾಸಿಲ್ಲದೇ, ಚಿಕಿತ್ಸೆಗೆ ಹಣವೂ ಇಲ್ಲದೇ ಸಿಕ್ಕಾಪಟ್ಟೆ ತೊಂದರೆ ಅನುಭವಿಸುತ್ತಿದ್ದೇನೆ ಎಂದು ಮಾಧ್ಯಮಗಳಲ್ಲಿ ಹೇಳಿಕೆ ನೀಡಿದ್ದರು.
ದರ್ಶನ್ ಜೊತೆಯೇ ನಿನಾಸಂ ನಲ್ಲಿ ಕೆಲಸ ಮಾಡುತ್ತಿದ್ದ ಅನಿಲ್ ಕೆಲ ಸಿನಿಮಾ ಮತ್ತು ಧಾರವಾಹಿಗಳಲ್ಲಿ ನಟಿಸ್ತಾ ಇದ್ದರು.ಜೀ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬ್ರಹ್ಮಗಂಟು ಸೀರಿಯಲ್ ನಲ್ಲಿ ನಟಿಸ್ತಾ ಇದ್ದ ಅನಿಲ್ ಅವರು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದರು. ಬಿಗ್ ಬಾಸ್ ಖ್ಯಾತಿಯ ಅಕ್ಷತಾ ಪಾಂಡವಪುರ ಜೊತೆ ಸಿನಿಮಾವೊಂದರಲ್ಲಿ ನಟಿಸಿದ್ದಾರೆ. ದರ್ಶನ್ ಸಹಾಯಕ್ಕೆ ಎದುರು ನೋಡುತ್ತಿದ್ದ ಅನಿಲ್ ಗೆ ಚಾಲೆಂಜಿಂಗ್ ಸ್ಟಾರ್ ಸೇರಿದಂತೇ ಕೆಲ ಕಲಾವಿದರು ಸಹಾಯ ಹಸ್ತ ಚಾಚಿದ್ದರಂತೆ. ಚಿಕಿತ್ಸೆ ಫಲಕಾರಿಯಾಗದೇ ಅನಿಲ್ ವಿಧಿವಶರಾಗಿದ್ದಾರೆ.
Comments