ರಾಹುಲ್'ಗಾಂಧಿ ಪರ ಪ್ರಚಾರ ಮಾಡಿದ ಸ್ಯಾಂಡಲ್ವುಡ್ ನಟಿ..!!
ಈಗಾಗಲೇ ಲೋಕಸಮರಕ್ಕೆ ದಿನಗಣನೆ ಪ್ರಾರಂಭವಾಗಿದೆ.. ಉಸಿರು ಬಿಗಿ ಹಿಡಿದುಕೊಂಡು ಪ್ರಚಾರದಲ್ಲಿ ತೊಡಗಿದ್ದಾರೆ. ಅಖಾಡದಲ್ಲಿ ಗೆಲ್ಲಲೆಬೇಕು ಎಂಬ ಪಣ ತೊಟ್ಟು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ.. ಲೋಕಸಭೆ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು. ರಾಜ್ಯದಲ್ಲಿ ಯಾವ ಕಾಂಗ್ರೆಸ್ ಅಭ್ಯರ್ಥಿ ಪರವೂ ಪ್ರಚಾರಕ್ಕೆ ಬರದಂತಹ ಮಾಜಿ ಸಂಸದೆ,ನಟಿ ರಮ್ಯಾ ಇದೀಗ ಕೇರಳದ ವಯನಾಡ್ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ಪರ ಪ್ರಚಾರದಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ ಎನ್ನಲಾಗಿದೆ.
ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ರಾಹುಲ್ ಗಾಂಧಿ ಸ್ಪರ್ಧಿಸುತ್ತಿರುವ ಕೇರಳದ ವಯನಾಡ್ ನಲ್ಲಿ ರಮ್ಯಾ ಅವರು ಫುಲ್ ಬ್ಯುಸಿಯಾಗಿದ್ದಾರೆ. ರಾಹುಲ್ ಗಾಂಧಿ ಗೆಲುವಿಗಾಗಿ ಶತಾಯ ಗತಾಯ ಪ್ರಯತ್ನ ನಡೆಸುತ್ತಿದ್ದಾರೆ. ರಮ್ಯಾ ಅವರು ಸೋಶಿಯಲ್ ಮೀಡಿಯಾ ಟೀಂ ಜೊತೆ ಸರಣಿ ಸಭೆಗಳನ್ನು ಮಾಡುತ್ತಿದ್ದಾರೆ ಎನ್ನಲಾಗಿದೆ. ಈ ಬಾರಿಯ ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಯಾವ ಕಾಂಗ್ರೆಸ್ ಅಭ್ಯರ್ಥಿ ಪರವೂ ಪ್ರಚಾರಕ್ಕೆ ಬಾರದ ರಮ್ಯಾ ಏನು ಮಾಡುತ್ತಿದ್ದಾರೆ ಎನ್ನುವ ಪ್ರಶ್ನೆ ಸಾಮಾನ್ಯವಾಗಿ ಎಲ್ಲರಲ್ಲಿಯೂ ಕೂಡ ಮೂಡಿತ್ತು.. ಇದೀಗ ಆ ಪ್ರಶ್ನೆಗೆ ಉತ್ತರ ಸಿಕ್ಕಿದೆ. ರಮ್ಯಾ ಕೇರಳದ ವಯನಾಡ್ ಕ್ಷೇತ್ರದಲ್ಲಿ ರಾಹುಲ್ ಪರ ಪ್ರಚಾರ ನಡೆಸುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಒಂದಲ್ಲ ಒಂದು ವಿಷಯಕ್ಕೆ ಟ್ರೋಲ್ ಆಗುತ್ತಿದ್ದು, ಮಂಡ್ಯ ಜನತೆಯ ಕೆಂಗಣ್ಣಿಗೆ ಗುರಿಯಾಗಿದ್ದು, ಕೆಲ ದಿನಗಳ ಹಿಂದಷ್ಟೆ ಸುಮಲತಾ ಅವರನ್ನು ಸೋಲಿಸಲು ಸಂಚು ರೂಪಿಸಿದ್ದರು ಎನ್ನಲಾಗಿದೆ.. ಟ್ರೋಲಿಗರ ಬಾಯಿಗೆ ಆಹಾರವಾಗಿರುವ ರಮ್ಯಾ ಇದೀಗ ಮತ್ತೆ ಸುದ್ದಿಯಾದ್ರೂ ಕೂಡ ಆಶ್ಚರ್ಯ ಪಡಬೇಕಿಲ್ಲ..
Comments