ಶ್ರೀಲಂಕಾ ಬಾಂಬ್ ಸ್ಫೋಟದಲ್ಲಿ ತನ್ನವರನ್ನ ಕಳೆದುಕೊಂಡ ಕನ್ನಡದ ಸ್ಟಾರ್ ನಟ...!!!

ಶ್ರೀಲಂಕಾದಲ್ಲಿ ನಡೆದ ಸರಣಿ ಬಾಂಬ್ ಸ್ಫೋಟಕ್ಕೆ ಇದೀಗ ಸ್ಯಾಂಡಲ್’ವುಡ್ ಸ್ಟಾರ್ ನಟರು ಕೂಡ ಕಣ್ಣೀರು ಸುರಿಸಿದ್ದಾರೆ. ಶ್ರೀಲಂಕಾದ ಬಾಂಬ್ ಸ್ಫೋಟದಲ್ಲಿ ಸುಮಾರು 290 ಕ್ಕೂ ಅಧಿಕ ಜನ ಮರಣ ಹೊಂದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈಗಾಗಲೇ ಕರ್ನಾಟಕದ ಅನೇಕ ಮಂದಿ ಈ ಬಾಂಬ್ ಸ್ಫೋಟದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಕೂದಲೆಳೆ ಅಂತರದಲ್ಲಿ ಸ್ಟಾರ್ ನಟಿ ರಾಧಿಕಾ ಶರತ್ ಕುಮಾರ್ ಅವರು ಕೂಡ ಈ ಅಪಾಯದಿಂದ ಪಾರಾಗಿದ್ದಾರೆ.
ನಟ ಗೋಲ್ಡನ್ ಸ್ಟಾರ್ ಗಣೇಶ್ ಸ್ನೇಹಿತರು ಬಾಂಬ್ ಸ್ಫೋಟದಲ್ಲಿ ಸಾವನ್ನಪ್ಪಿದ್ದಾರೆ. ತಮ್ಮ ಪ್ರೀತಿಯ ಸ್ನೇಹಿತರನ್ನು ಕಳೆದುಕೊಂಡಿದ್ದಾರೆ. ಈ ಬಗ್ಗೆ ಟ್ವಿಟ್ಟರ್ ಖಾತೆಯಲ್ಲಿ ನೋವನ್ನು ಹಂಚಿಕೊಂಡಿದ್ದಾರೆ. ಪುಟ್ಟರಾಜು ಮತ್ತು ಮರೀಗೌಡ ಮೃತ ಪಟ್ಟ ಗಣೇಶ್ ಗೆಳೆಯರಾಗಿದ್ದಾರೆ. ಆದರೆ ಈ ಬಗ್ಗೆ ಗಣೇಶ್ ಟ್ವಿಟ್ಟರ್ ಖಾತೆಯಲ್ಲಿ ನೀವು ಇನ್ನಿಲ್ಲ ಎನ್ನುವ ಸುದ್ದಿ ನಂಬಲು ಆಗುತ್ತಿಲ್ಲ. ನನಗೆ ಆಗುತ್ತಿರುವ ದುಃಖವನ್ನು ಹೇಳಲು ಪದಗಳಿಲ್ಲ. ನನ್ನ ಪ್ರೀತಿಯ ಸ್ನೇಹರಾದ ಪುಟ್ಟರಾಜು ಮತ್ತು ಮರೀಗೌಡ ಇಬ್ಬರನ್ನು ಬಹಳ ಮಿಸ್ ಮಾಡಿಕೊಳ್ಳುತ್ತೇನೆ.'' ಎಂದು ಅವರೊಂದಿಗೆ ತೆಗೆಸಿಕೊಂಡಿರುವ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ಉಗ್ರರ ದಾಳಿಯಲ್ಲಿ ಹತರಾದ ಎಲ್ಲರಿಗೂ ಸಂತಾಪ ಸೂಚಿಸಿದ್ದಾರೆ.
Comments