ಸಾಮಾಜಿಕ ಜಾಲತಾಣಗಳಲ್ಲಿ ‘ನಿಖಿಲ್ ಎಲ್ಲಿದ್ದೀಯಪ್ಪಾ’ ಸಿನಿಮಾದ ಪೋಸ್ಟರ್ ವೈರಲ್

ಸದ್ಯ ಸ್ಯಾಂಡಲ್’ವುಡ್ ನಲ್ಲಿ ‘ನಿಖಿಲ್ ಎಲ್ಲಿದ್ದೀಯಪ್ಪಾ’ ಸಿನಿಮಾದ ಟೈಟಲ್ ಸಿಕ್ಕಾಪಟ್ಟೆ ಡಿಮ್ಯಾಂಡ್ ಕ್ರಿಯೆಟ್ ಮಾಡಿತ್ತು. ಈ ಸಿನಿಮಾವನ್ನು ನಾನೇ ಮಾಡುತ್ತೇನೆ ಎಂದು ನಿಖಿಲ್ ಹೇಳಿದ್ದರು… ಇದೇ ಟೈಟಲ್ ನಲ್ಲಿ ಸಿನಿಮಾ ಮಾಡುತ್ತೇನೆ ಎಂದು ನಿಖಿಲ್ ಹೇಳಿಕೆಯ ಬೆನ್ನಲ್ಲೇ ಅಭಿಮಾನಿಗಳು ಮತ್ತು ಬೆಂಬಲಿಗರು ಖುಷಿಯಾಗಿದ್ದು, ಇದೀಗ ಸಿನಿಮಾದ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಸಪ್ತಗಿರಿ ಕ್ರಿಯೇಷನ್ಸ್, ಕೃಷ್ಣೇಗೌಡ ನಿರ್ಮಾಪಕ, ಅಶೋಕ್ ಕೆ. ಕಡಬ ನಿರ್ದೇಶನ ಎಂದು ಪೋಸ್ಟರ್ ರಿಲೀಸ್ ಮಾಡಲಾಗಿದೆ. ಅದರಲ್ಲಿ ಇಂಡಿಯಾ ಗೇಟ್ ಬಳಿ ನಿಖಿಲ್ ಕುಮಾರಸ್ವಾಮಿ ನಡೆದು ಹೋಗುತ್ತಿರುವುದನ್ನು ಈ ಪೋಸ್ಟರ್ ನಲ್ಲಿ ಕಾಣಬಹುದಾಗಿದೆ. ಜೊತೆಗೆ ಸಂಸತ್ತಿನ ಪೋಟೋ ಹಾಕಿ ವಿರೋಧಿಗಳಿಗೆ ಸಖತ್ತಾಗಿಯೇ ಟಾಂಗ್ ಕೊಟ್ಟಿದ್ದಾರೆ. ಈ ಮೂಲಕ ನಿಖಿಲ್ ಕುಮಾರಸ್ವಾಮಿ ಅವರು ಇಂಡಿಯಾ ಗೇಟ್‍ನಿಂದ ಸಂಸತ್ತಿಗೆ ಹೋಗುತ್ತಿದ್ದಾರೆ ಎಂಬಂತೆ ಬಿಂಬಿಸಿ ಪೋಸ್ಟರ್ ತಯಾರು ಮಾಡಿದ್ದಾರೆ. ಇದೀಗ ಈ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ಹರಿದಾಡುತ್ತಿದೆ. ಸದ್ಯ ನಿಖಿಲ್ ಎಲ್ಲಿದ್ದೀಯಪ್ಪಾ ಸಿನಿಮಾ ಟೈಟಲ್ ಸಿಕ್ಕಾಪಟ್ಟೆ ಟ್ರೆಂಡ್ ಕ್ರಿಯೆಟ್ ಮಾಡಿದೆ. ಸ್ಯಾಂಡಲ್ ವುಡ್ ನಲ್ಲಿ ಈ ಸಿನಿಮಾ ಯಾವ ರೀತಿಯಲ್ಲಿ ಧೂಳ್ ಎಬ್ಬಿಸುತ್ತದೆ ಎಂಬುದನ್ನು ಕಾದು ನೋಡಬೇಕಿದೆ..
Comments