ಆಗಸ್ಟ್ 9ಕ್ಕೆ ಕುರುಕ್ಷೇತ್ರ ಸಿನಿಮಾ ಬಿಡುಗಡೆಯಾಗಲ್ಲ..!! ಮತ್ತೆ ಯಾವಾಗ..?
ಸ್ಯಾಂಡಲ್’ವುಡ್ ನ ಸುಲ್ತಾನ, ಬಾಕ್ಸ್ ಆಫೀಸ್ ನ ಸುಲ್ತಾನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಅಂತು ಇಂತೂ ಸ್ಯಾಂಡಲ್ ವುಡ್ ನ ಬಹುನಿರೀಕ್ಷಿತ ಸಿನಿಮಾವಾದ ಕುರುಕ್ಷೇತ್ರ ಸಿನಿಮಾದ ಬಿಡುಗಡೆ ದಿನಾಂಕ ಫಿಕ್ಸ್ ಆಗಿದೆ. ಸ್ಯಾಂಡಲ್‍ವುಡ್ ಸ್ಟಾರ್ ಗಳ ಬಾಕ್ಸ್ ಆಫೀಸ್ ಯುದ್ಧ ಇದೀಗ ಕ್ಯಾನ್ಸಲ್ ಆಗಿದೆ. ಸ್ಯಾಂಡಲ್‍ವುಡ್‍ನ ಬಹುನಿರೀಕ್ಷಿತ ಚಿತ್ರಗಳಾದ ‘ಮುನಿರತ್ನ ಕುರುಕ್ಷೇತ್ರ’ ಹಾಗೂ ‘ಪೈಲ್ವಾನ್’ ಒಂದೇ ದಿನ ತೆರೆ ಮೇಲೆ ಬರಲು ಸಿದ್ದವಾಗಿತ್ತು.
ಆದರೆ ಈಗ ಆಗಸ್ಟ್ 9ರಂದು ಬಿಡುಗಡೆ ಆಗಬೇಕಿದ್ದ ಕುರುಕ್ಷೇತ್ರ ಚಿತ್ರ ಆಗಸ್ಟ್ 2ರಂದು ಬಿಡುಗಡೆ ಆಗಲಿದೆ. ಕಿಚ್ಚ ಸುದೀಪ್ ನಟನೆಯ ‘ಪೈಲ್ವಾನ್’ ಚಿತ್ರ ಕೂಡ ಆಗಸ್ಟ್ 9ರಂದು ಬಿಡುಗಡೆಯಾಗಲಿದೆ ಎಂಬ ಮಾತು ಕೇಳಿ ಬಂದಿತ್ತು. ಆಗಸ್ಟ್ 29ಕ್ಕೆ ಪೈಲ್ವಾನ್ ರಿಲೀಸ್ ಮಾಡಲು ನಿರ್ದೇಶಕ ಕೃಷ್ಣ ನಿರ್ಧರಿಸಿದ್ದಾರೆ. ಸೆ.2ರಂದು ಸುದೀಪ್ ಅವರ ಜನ್ಮದಿನವಿರುವ ಕಾರಣ ಈ ದಿನಾಂಕವನ್ನು ನಿಗದಿ ಮಾಡಲಾಗಿದೆ. ಸದ್ಯ ಸುದೀಪ್ ಅಭಿಮಾನಿಗಳು ಖುಷಿ ಆಗಿದ್ದಾರೆ. ಕುರುಕ್ಷೇತ್ರ ಸಿನಿಮಾವು 50 ರಿಂದ 60 ಕೋಟಿ ರೂ. ವೆಚ್ಚದಲ್ಲಿ ವೃಷಭಾದ್ರಿ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗಿದೆ. ಕುರುಕ್ಷೇತ್ರ ಚಿತ್ರವನ್ನು ನಾಗಣ್ಣ ನಿರ್ದೇಶಿಸಿದ್ದಾರೆ. ನೂತನ ತಂತ್ರಜ್ಞಾನದಲ್ಲಿ ಬಾಹುಬಲಿ ಚಿತ್ರಕ್ಕಾಗಿ ದುಡಿದ ತಂತ್ರಜ್ಞಾನಿಗಳ ಕೈಚಳಕದಲ್ಲಿ ಕನ್ನಡದ ಕುರುಕ್ಷೇತ್ರ ಮೂಡಿ ಬಂದಿದೆ. ತೆರೆಮೇಲೆ ಯಾವ ರೀತಿ ಈ ಸಿನಿಮಾ ಮೋಡಿ ಮಾಡುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
Comments