ಲಿಪ್ ಲಾಕ್ ಅಂದ್ರೆ ಏನು ಎಂದ ಸ್ಟಾರ್ ನಟ..!!

15 Jul 2019 11:09 AM | Entertainment
1164 Report

ಕೆಲ ಸ್ಟಾರ್’ಗಳು ಆಗಿಂದಾಗೆ ಸಿಕ್ಕಾಪಟ್ಟೆ ಸುದ್ದಿಯಾಗುತ್ತಿರುತ್ತಾರೆ… ಟಾಲಿವುಡ್ ನಟ ವಿಜಯ್ ದೇವರಕೊಂಡ ಹೆಚ್ಚು ಲಿಪ್ ಲಾಕ್ ನಿಂದಾನೇ ಸುದ್ದಿಯಾಗಿದ್ದಾರೆ.. ಗೀತಾ ಗೋವಿಂದಂ ಸಿನಿಮಾದಿಂದಾನೇ ಹೆಚ್ಚು ಸುದ್ದಿಯಾಗಿದ್ದಾರೆ.. ಅಷ್ಟೆ ಅಲ್ಲದೆ ಲಿಪ್‍ಲಾಕ್ ಅಂದರೆ ಏನು..? ಈ ಪದವೇ ನನಗಿಷ್ಟವಾಗಲಿಲ್ಲ ಎಂದು ಟಾಲಿವುಡ್ ನಟ ವಿಜಯ್ ದೇವರಕೊಂಡ  ಹೇಳಿ ಮತ್ತೆ ಸುದ್ದಿಯಾಗಿದ್ದಾರೆ.  ‘ಡಿಯರ್ ಕಾಮ್ರೆಡ್’ ಚಿತ್ರತಂಡ ನಡೆಸಿ ಮಾತನಾಡಿದ ಅವರು, ಕಿಸ್ಸಿಂಗ್ ಒಂದು ಭಾವಾತ್ಮಕ ಅಂಶ. ಅದಕ್ಕೆ ಬೆಲೆ ಕೊಡಬೇಕು ಎಂದರು.

ನಟನೆಯಲ್ಲಿ ಅಳುವುದು, ಕೋಪ ವ್ಯಕ್ತಪಡಿಸುವುದು, ಪ್ರೀತಿಯಿಂದ ಚುಂಬಿಸುವುದು ಇದೆಲ್ಲಾ ಭಾವನೆಗಳನ್ನು ವ್ಯಕ್ತ ಪಡಿಸುವುದು ಒಂದು ರೀತಿಯಷ್ಟೆ.. ಚುಂಬಿಸುವುದು ಲಿಪ್ಸ್ ಲಾಕಿಂಗ್ ಅಲ್ಲ. ಈ ಪದ ಕೇಳಿದರೆ ನನಗೆ ಬೇಜಾರಾಗುತ್ತದೆ. ಈಗಲೂ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಕಿಸ್ಸಿಂಗ್ ಎಂದೇ ಜನರು ಭಾವಿಸುತ್ತಾರೆ. ಅದು ಆ ಪಾತ್ರಗಳು ಎಂದುಕೊಳ್ಳುವುದಿಲ್ಲ. ಪಾತ್ರಗಳನ್ನು ರೀತಿ ನೋಡಿ. ನಿಜ ಜೀವನಕ್ಕೆ ಹೋಲಿಸಬೇಡಿ ಎಂದು ಮನವಿಯನ್ನು ಮಾಡಿಕೊಂಡರು. ಅರ್ಜುನ್ ರೆಡ್ಡಿ ಸಿನಿಮಾದ ನಂತರ ಜನರು ನನ್ನನ್ನು ನೋಡಿ ಭಯಬಿದ್ದರು. ಆ ಸಿನಿಮಾದಲ್ಲಿ ನನ್ನ ಪಾತ್ರ ಆಗಿತ್ತು. ನಿಜ ಜೀವನದಲ್ಲಿ ನಾನು ಸಿಗರೇಟ್ ಕೂಡ ಸೇದುವುದಿಲ್ಲ. ಪಾತ್ರಕ್ಕೆ ತಕ್ಕಂತೆ ನಾನು ನಟಿಸಿದ್ದೇನೆ. ಹೀಗಾಗಿ ಕಿಸ್ಸಿಂಗ್ ಸೀನ್ ಬಗ್ಗೆ ವಿವರಣೆ ನೀಡಬೇಕಾದ ಅಗತ್ಯವಿಲ್ಲ ಎಂದು ಹೇಳಿದರು. ಒಟ್ಟಾರೆಯಾಗಿ ಈ ಪದ ಕೇಳಿದರೆ ನನಗೆ ಕಿರಿ ಕಿರಿ ಅನಿಸುತ್ತದೆ ಎಂದಿದ್ದಾರೆ.

Edited By

Manjula M

Reported By

Manjula M

Comments