ಹೊಸ ವರ್ಷಕ್ಕೆ ಹೊಸ ಲುಕ್ ನೊಂದಿಗೆ ಬಂದ ಪುನೀತ್ ಜೊತೆ ಇದ್ಯಾರದ್ದು ಹೊಸ ಎಂಟ್ರಿ?

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹೊಸ ವರ್ಷಕ್ಕೆ ಬಹುನಿರೀಕ್ಷೆಯ ಯುವರತ್ನ ಚಿತ್ರದ ಹೊಸ ಲುಕ್ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದಾರೆ. ಹೊಸ ಲುಕ್ ನಲ್ಲಿ ಪವರ್ ಸ್ಟಾರ್ ಮತ್ತಷ್ಟು ಯಂಗ್ ಅಂಡ್ ಎನರ್ಜಿಟಿಕ್ ಆಗಿ ಮಿಂಚಿರುವುದನ್ನು ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ.
ನಿರ್ದೇಶಕ ಸಂತೋಷ್ ಆನಂದ್ ರಾಮ್ ಸಾರಥ್ಯದಲ್ಲಿ ಮೂಡಿ ಬಂದಿರುವ 'ಯುವರತ್ನ' ಕನ್ನಡ ಚಿತ್ರಾಭಿಮಾನಿಗಳಲ್ಲಿ ಭಾರಿ ನಿರೀಕ್ಷೆ ಹುಟ್ಟುಹಾಕಿದು ಬೆನ್ನಿಗೆ ಅಸ್ಥಿಪಂಜರ ಕಟ್ಟಿಕೊಂಡು ಎಂಟ್ರಿ ಕೊಟ್ಟಿರುವ ಪುನೀತ್ ನೋಡಿ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಚಿತ್ರದಲ್ಲಿ ಪುನೀತ್ ಕಾಲೇಜು ವಿದ್ಯಾರ್ಥಿಯಾಗಿ ಕಾಣಿಸಿಕೊಂಡಿದ್ದಾರೆ. ಯುವರತ್ನ ಶಿಕ್ಷಣ ಮಾಫಿಯ ಬಗ್ಗೆ ಇರುವ ಸಿನಿಮಾ. ಚಿತ್ರದಲ್ಲಿ ದೊಡ್ಡ ಕಲಾವಿದರು ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಹಂಬಾಳೆ ಫಿಲ್ಮ್ ಬಂಡವಾಳ ಹೂಡಿದ್ದಾರೆ.
Comments