ಹಿರಿಯ ಗಾಯಕ ಎಸ್ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರ

ಹಿರಿಯ ಗಾಯಕ ಎಸ್ಪಿ ಬಾಲಸುಬ್ರಹ್ಮಣ್ಯಂ ಕೆಲವು ದಿನಗಳ ಹಿಂದೆ ಕೊರೊನಾಕ್ಕೆ ತುತ್ತಾಗಿ ಚೇತರಿಸಿಕೊಂಡಿದ್ದರು. ಆದರೆ ಈಗ ಮತ್ತೆ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಎಸ್.ಪಿ.ಬಾಲಸುಬ್ರಹ್ಮಣ್ಯಂ ಆರೋಗ್ಯದಲ್ಲಿ ಚೇತರಿಕೆ ಇದೆ, ಅವರು ಕೆಲವೇ ದಿನಗಳಲ್ಲಿ ಮನೆಗೆ ಮರಳಲಿದ್ದಾರೆ ಎಂದು ಎಸ್.ಪಿ.ಬಾಲಸುಬ್ರಹ್ಮಣ್ಯಂ ಪುತ್ರ ಕೆಲವು ದಿನಗಳ ಹಿಂದಷ್ಟೆ ಹೇಳಿದ್ದರು. ಆದರೆ ಈಗ ಹಠಾತ್ತನೆ ಬಂದಿರುವ ಸುದ್ದಿಯಂತೆ ಎಸ್‌ಪಿಬಿ ಆರೋಗ್ಯ ಸ್ಥಿತಿ ಗಂಭೀರವಾಗಿದೆ.
ಹಿರಿಯ ಗಾಯಕ ಎಸ್ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯವು ಕಳೆದ 24 ಗಂಟೆಗಳಲ್ಲಿ ಹದಗೆಟ್ಟಿದೆ ಎಂದು ಆಸ್ಪತ್ರೆ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಈ ಮಧ್ಯೆ ನಟ/ನಿರ್ದೇಶಕ ಕಮಲ್ ಹಾಸನ್ ಅವರು ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ವೈದ್ಯರ ಭೇಟಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 'ಅವರು ಆರಾಮಾಗಿದ್ದಾರೆ ಎಂದು ಹೇಳಲು ಸಾಧ್ಯವಿಲ್ಲ. ಅವರು ಸದ್ಯ ವೆಂಟಿಲೇಟರ್ ಸಪೋರ್ಟ್‌ನಲ್ಲಿದ್ದಾರೆ. ಅವರ ಆರೋಗ್ಯ ಪರಿಸ್ಥಿತಿ ತುಂಬ ಗಂಭೀರವಾಗಿದೆ. ಅವರ ಕುಟುಂಬ ಅವರಿಗಾಗಿ ಪ್ರಾರ್ಥಿಸುತ್ತಿದೆ' ಎಂದು ಹೇಳಿದ್ದಾರೆ.
Comments