ಸಿಇಟಿ ಫಲಿತಾಂಶ ಪ್ರಕಟ.. ಪ್ರತೀಕ್ ಟಾಪರ್

ಬೆಂಗಳೂರು : 2017ನೇ ಸಾಲಿನ ಸಿಇಟಿ ಫಲಿತಾಂಶ ಪ್ರಕಟವಾಗಿದೆ. ಇಂಜಿನಿಯರಿಂಗ್ ವಿಭಾಗದಲ್ಲಿ ಪ್ರತೀಕ್ ನಾಯಕ್ ಹಾಗೂ ಹೋಮಿಯೋಪತಿ ವಿಭಾಗದಲ್ಲಿ ರಕ್ಷಿತಾ ಪ್ರಥಮ ಸ್ಥಾನ ಗಳಿಸಿದ್ದಾರೆ. ಸಿಇಟಿ ಪರೀಕ್ಷೆಯಲ್ಲಿ ೧.೮೪ ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ರು.
ಮಲ್ಲೇಶ್ವರಂನ ಕೆಇಎ ಕಚೇರಿಯಲ್ಲಿ ಸಿಇಟಿ ಫಲಿತಾಂಶವನ್ನು ಪ್ರಕಟಿಸಲಾಗಿದೆ. ವೈದ್ಯಕೀಯ ಸಚಿವ ಡಾ.ಶರಣ ಪ್ರಕಾಶ ಪಾಟೀಲ್ ಸುದ್ದಿಗೋಷ್ಟಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ.೧,೮೫೪೧೧ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಯಲ್ಲಿ ಭಾಗಿಯಾಗಿದ್ದರು. ಎಲೆಕ್ಟ್ರಾನಿಕ್ ಡಿಸ್ ಪ್ಲೇ ಯಲ್ಲಿ ವಿದ್ಯಾರ್ಥಿಗಳ ಫೊಟೋವನ್ನು ಪ್ರದರ್ಶಿಸುವ ಮೂಲಕ ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ ಮಾಹಿತಿ ನೀಡಿದ್ದಾರೆ.
ಇಂಜಿನಿಯರಿಂಗ್ ನಲ್ಲಿ ಪ್ರತೀಕ ನಾಯಕ್ ಪ್ರಥಮ ಸ್ಥಾನ ಪಡೆದಿದ್ದಾರೆ. ಮಂಗಳೂರಿನ ಎಕ್ಸ್ ಪರ್ಟ್ ಕಾಲೇಜಿನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ. ವಿವಿಎಸ್ ಸರ್ದಾರ ಕಾಲೇಜು ವಿದ್ಯಾರ್ಥಿ ರ್ಯಾಂಕ್ ಪಡೆದಿದ್ದಾರೆ.
ಬೆಂಗಳೂರಿನ ಆರ್.ವಿ ಪಿಯು ಕಾಲೇಜಿನ ಅನಿರುದ್ಧ ಮೂರನೇ ರ್ಯಾಂಕ್ ಪಡೆದಿದ್ದಾರೆ. ಮೇ, ೨,೩, ಹಾಗೂ ೪ರಂದು ಸಿಇಟಿ ಪರೀಕ್ಷೆಗಳು ನಡೆದಿದ್ದವು.
Comments