ಪ್ರಸಕ್ತ ವರ್ಷದಿಂದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್
ಬೆಂಗಳೂರು : ಇದೇ ಶೈಕ್ಷಣಿಕ ವರ್ಷದಿಂದ ಎಸ್ಸಿ - ಎಸ್ಟಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಶಾಲಾ ಹಂತದಿಂದ ಕಾಲೇಜು ಹಂತದವರೆಗೂ ಎಸ್ಸಿ-ಎಸ್ಟಿ ಸಮುದಾಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲಾಗುವುದದು ಈಗಿರುವ ವ್ಯವಸ್ಥೆಯಲ್ಲಿ ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಪಾಸ್ ನೀಡಲಾಗುತ್ತದೆ. ಶೇ ೫೦ರಷ್ಟನ್ನು ವಿದ್ಯಾರ್ಥಿಗಳು ಭರಿಸಬೇಕು ಎಂದು ಹೇಳಿದ್ದಾರೆ.
ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮ, ಬಾಕಿ ಉಳಿದಿರುವ ಶೇ ೨೫ರಷ್ಟನ್ನು ವಿದ್ಯಾರ್ಥಿಗಳು ಭರಿಸುತ್ತಿದ್ದಾರೆ. ಇನ್ನು ಮುಂದೆ ವಿದ್ಯಾರ್ಥಿಗಳಿಂದ ಹಣ ಪಡೆಯದೆ ಉಚಿತ ಬಸ್ ಪಾಸ್ ನೀಡಲು ಸಿಎಂ ಹೇಳಿದರು. ಇದಕ್ಕೆ ಅಗತ್ಯವಾದ ಪ್ರಸ್ತಾವನೆಯನ್ನು ಕಳುಹಿಸುವಂತೆ ಸಾರಿಗೆ ಇಲಾಖೆಗೆ ತಾಕೀತು ಮಾಡಿದರು.
Comments