ಕುಲ್ಗಾಮ್ ನಲ್ಲಿ ಉಗ್ರರಿಂದ ಫೈರಿಂಗ್

ಜಮ್ಮುಕಾಶ್ಮೀರ: ಜಮ್ಮುಕಾಶ್ಮೀರ ದ ಕುಲ್ಗಾಮ್ ನಲ್ಲಿ ಉಗ್ರರು ಸೇನೆನೆಲೆಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾರೆ. ಈ ವೇಳೆ ೬ ಮಂದಿ ಸೈನಿಕರು ಗಂಭೀರವಾಗಿ ಗಾಯಗೊಂಡಿದ್ದು, ಇಬ್ಬರು ಯೋಧರು ಸಾವನ್ನಪ್ಪಿದ್ದಾರೆ.
ಪ್ರಸ್ತುತ ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ ಸೇನಾ ಪಡೆಗಳು ಸುತ್ತುವರೆದಿದ್ದು, ಉಗ್ರರನ್ನು ಸದೆಬಡಿಯಲು ಸೇನಾ ಪಡೆ ಕಾರ್ಯಾಚರಣೆಯನ್ನು ಆರಂಭಿಸಿದೆ. ಕಾರ್ಯಾಚರಣೆ ಹಿನ್ನಲೆಯಲ್ಲಿ ಹೆದ್ದಾರಿ ಸಂಚಾರವನ್ನು ಬಂದ್ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಸೇನಾ ನೆಲೆಯನ್ನು ಗುರಿಯಾಗಿಸಿಕೊಂಡ ಉಗ್ರರು ಭಾರೀ ಗುಂಡಿನ ಮಳೆ ಗೈದಿದ್ದಾರೆ. ಗಾಯಾಳು ಸೈನಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ ಸೇನಾ ಪಡೆಗಳು ಜಮಾವಣೆಗೊಂಡು, ಉಗ್ರರಿಗಾಗಿ ಕಾರ್ಯಚರಣೆ ನಡೆಸುತ್ತಿದ್ದಾರೆ.
Comments