ರಾಜ್ಯಕ್ಕೆ ನಾಳೆ ನೈರುತ್ಯ ಮುಂಗಾರು ಪ್ರವೇಶ?

ಬೆಂಗಳೂರು: ವಾಡಿಕೆಯಂತೆ ೨ ದಿನ ಮೊದಲು ಮುಂಗಾರು ಕೇರಳವನ್ನು ಪ್ರವೇಶಿಸಿತ್ತು. ಆದ್ರೆ ಮುಂಗಾರು ದುರ್ಬಲಗೊಂಡ ಹಿನ್ನಲೆಯಲ್ಲಿ ರಾಜ್ಯದ ಕರಾವಳಿ ಭಾಗದಲ್ಲಿ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ.
ನೈರುತ್ಯ ಮುಂಗಾರು ರಾಜ್ಯವನ್ನು ೭ ಅಥವಾ ೮ರಂದು ಪ್ರವೇಶಿಸುತ್ತದೆ ಎಂದು ತಿಳಿದು ಬಂದಿದೆ. ಕರ್ನಾಟಕ ರಾಜ್ಯದ ಕರಾವಳಿ ಭಾಗದಲ್ಲಿ ಬುಧುವಾರ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ಉಸ್ತುವಾರಿ ಕೇಂದ್ರದ ವಿಜ್ಞಾನಿ ಎಸ್,ಎಸ್.ಎಂ ಗವಾಸ್ಕರ್ ತಿಳಿಸಿದ್ದಾರೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ಬೆಂಗಳೂರು ನಗರ ಗ್ರಾಮಾಂತರ ಜಿಲ್ಲೆಗಳಲ್ಲಿ ೯ರಂದು ಹಾಗೂ ಉತ್ತರ ಒಳನಾಡಿನಲ್ಲಿ ೧೦-೧೧ ರೊಳಗೆ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ.
Comments