ಜೂನ್ ೧೨ಕ್ಕೆ ಕರ್ನಾಟಕ ಬಂದ್
ಬೆಂಗಳೂರು: ಬಯಲು ಸೀಮೆಗೆ ಶಾಶ್ವತ ನೀರಾವರಿ ಯೋಜನೆ ಜಾರಿಗೆ ಒತ್ತಾಯಿಸಿ, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕನ್ನಡ ಒಕ್ಕೂಟದ ವತಿಯಿಂದ ಜೂನ್ ೧೨ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ ಎಂದು ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಅವರು, ಈ ಬಗ್ಗೆ ಯಾವ ಜನಪ್ರಿತಿನಿಧಿಯೂ ರಾಜ್ಯ ಮತ್ತು ಕೇಂದ್ರ ಸರ್ಕಾರ ಮಟ್ಟದಲ್ಲಿ ಈ ಕುರಿತು ದ್ವನಿ ಎತ್ತುತ್ತಿಲ್ಲ ಎಂದರು. ಸರ್ಕಾರ ಹಾಗೂ ಜನಪ್ರತಿನಿಧಿಗಳ ಈ ಧೋರಣೆ ಖಂಡಿಸಿ ಬಂದ್ ಗೆ ಕರೆ ನೀಡುತ್ತಿದ್ದೇವೆ ಎಂದು ತಿಳಿಸಿದರು.
ಶಾಶ್ವತ ನೀರಾವರಿ ಯೋಜನೆ ಜಾರಿಗಾಗಿ ಒತ್ತಾಯಿಸಿ ಕೋಲಾರದಲ್ಲಿ ನಡೆಯುತ್ತಿರುವ ಹೋರಾಟ ಒಂದು ವರ್ಷ ಪೂರೈಸಿದರು ಸರ್ಕಾರ ಯೋಜನೆಯ ವಿಚಾರದಲ್ಲಿ ಸಕಾರಾತ್ಮಕ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂದರು.
Comments