ಇಫ್ತಾರ್ ನಿಂದ ಹಿಂದೂ ಧರ್ಮದ ಶ್ರೇಷ್ಟತೆ ಹೆಚ್ಚಿದೆ
ಉಡುಪಿ: ಕೃಷ್ಣ ಮಠದಲ್ಲಿ ಮುಸ್ಲಿಂ ಬಾಂಧವರಿಗಾಗಿ ಆಯೋಜಿಸಿದ್ದ ಇಫ್ತಾರ್ ಕೂಟದಿಂದ ಹಿಂದೂ ಧರ್ಮಕ್ಕೆ ಯಾವುದೇ ರೀತಿಯ ಅಪಚಾರವಾಗಿಲ್ಲ. ಬದಲಿಗೆ ಹಿಂದೂ ಧರ್ಮದ ಶ್ರೇಷ್ಠತೆ ಹೆಚ್ಚಿದೆ ಎಂದು ಪೇಜಾವರ ವಿಶ್ವೇಶ್ ತೀರ್ಥ ಸ್ವಾಮೀಜಿ ತಿರುಗೇಟು ನೀಡಿದ್ದಾರೆ.
ಕೃಷ್ಣ ಮಠದಲ್ಲಿ ಇಫ್ತಾರ್ ಮಾಡಿದ್ದಕ್ಕೆ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಆಕ್ಷೇಪ ವ್ಯಕ್ತಪಡಿಸಿದ್ದರು. ಇದಕ್ಕೆಸ್ಪಷ್ಟನೆ ನೀಡಿರುವ ಸ್ವಾಮೀಜಿ , ನಾವು ನಮ್ಮ ಧರ್ಮಕ್ಕೆ ಅಪಚಾರವಾಗದಂತೆ ಇತರ ಧರ್ಮದವರೊಂದಿಗೆ ಪ್ರೀತಿಯ ಸಂಬಂಧವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.
ಹಿಂದೂ ಧರ್ಮಕ್ಕೆ ನಿಷ್ಟರಾಗಿದ್ದುಕೊಂಡು ಹಿಂದೂ ಧರ್ಮಕ್ಕೆ ಅನ್ಯಾಯವಾದಾಗ ಹೋರಾಟ ಮಾಡಿದ್ದೇನೆ ಮುಂದೆಯೂಮಾಡುತ್ತೇನೆ. ಇದೇ ವೇಳೆ ಇತರ ಧರ್ಮದವರೊಂದಿಗೆ ಸೌಹಾರ್ದತೆಯನ್ನು ಕಾಪಾಡುವುದು ಕೂಡ ಅಷ್ಟೇ ಮುಖ್ಯಎಂದು ಹೇಳಿದರು.
Comments