ನಾಳೆಯಿಂದ ದ್ವಿತೀಯ ಪಿಯು ಪೂರಕ ಪರೀಕ್ಷೆ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಜೂನ್ 28ರಿಂದ ಜುಲೈ 8ರವರೆಗೆ ನಡೆಯಲಿದ್ದು, ೨.೫೧ ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಇದೇ ವರ್ಷ ಮಾರ್ಚ್ ನಲ್ಲಿ ನಡೆದಿದ್ದ ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣ ರಾಗಿದ್ದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ನಡೆಸಲಾಗುತ್ತಿದೆ. ಪರೀಕ್ಷೆ ಮುಗಿದ ಒಂದೆರೆಡು ದಿನಗಳಲ್ಲೇ ಮೌಲ್ಯಮಾಪನ ಆರಂಭಿಸಿ ಜುಲೈ ಅಂತ್ಯದೊಳಗೆ ಫಲಿತಾಂಶ ನೀಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ವಾರ್ಷಿಕ ಪರೀಕ್ಷೆಯಲ್ಲಿ ಹಾಜರಾಗಿದ್ದ 6,79,061 ವಿದ್ಯಾರ್ಥಿಗಳ ಪೈಕಿ 3,23,364 ವಿದ್ಯಾರ್ಥಿಗಳು ಅನುತೀರ್ಣ ಆಗಿದ್ದರು. ಇದರಲ್ಲಿ 2,51,636 ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ.
ರಾಜ್ಯದ 303 ಕೇಂದ್ರಗಳಲ್ಲಿ ಪೂರಕ ಪರೀಕ್ಷೆ ನಡೆಯಲಿದೆ. ಸೂಕ್ಷ್ಮ ಕೇಂದ್ರಗಳಲ್ಲಿ ಅಗತ್ಯ ಭದ್ರತಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
Comments