ರಾಷ್ಟ್ರಪತಿ ಅಭ್ಯರ್ಥಿ ಮೀರಾ ಕುಮಾರ್ ಬೆಂಗಳೂರಿಗೆ ಆಗಮನ

ಬೆಂಗಳೂರು: ರಾಷ್ಟ್ರಪತಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಮೀರಾ ಕುಮಾರ್ ಮತ ಯಾಚನೆ ಮಾಡಲು ಬೆಂಗಳೂರಿಗೆ ಆಗಮಿಸಿದ್ದಾರೆ.ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದ ಮೀರಾ ಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್, ಸಮಾಜ ಕಲ್ಯಾಣ ಇಲಾಖೆ ಸಚಿವ ಆಂಜನೇಯ ಸಾಥ್ ನೀಡಿದರು.
ವಿಐಪಿ ಲಾಂಜ್ ನಲ್ಲಿ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ಜತೆ ಮೀರಾಕುಮಾರ್ ರಾಷ್ಟ್ರಪತಿ ಚುನಾವಣೆ ಕುರಿತು ಚರ್ಚೆ ನಡೆಸಿದರು. ಈಗಾಗ್ಲೇ ಜೆಡಿಎಸ್ ಕೂಡಾ ಮೀರಾ ಕುಮಾರ್ ಅವರಿಗೆ ಬೆಂಬಲ ವ್ಯಕ್ತಪಡಿಸಿದೆ. ಇದರೊಂದಿಗೆ ಮೀರಾ ಕುಮಾರ್ ಜೆಡಿಎಸ್ ಶಾಸಕರು, ಸಂಸದರು ಬೆಂಬಲ ಕೋರುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಬಳಿಕ ಕೆಪಿಸಿಸಿ ಕಚೇರಿಯಲ್ಲಿ ಸಂಸದರು, ಶಾಸಕರ ಜತೆ ಮೀರಾ ಕುಮಾರ್ ಸಂವಾದ ನಡೆಸಲಿದ್ದಾರೆ. ಮತದಾನದ ಹಕ್ಕು ಹೊಂದಿರುವ ಎಲ್ಲಾ ಶಾಸಕರು ಹಾಗೂ ಸಂಸದರನ್ನು ಈ ಸಂವಾದ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಜುಲೈ 17 ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದೆ.
Comments