ಗೋರಕ್ಷಣೆ ಹೆಸರಲ್ಲಿ ಕಾನೂನು ಕೈಗೆತ್ತಿಕೊಳ್ಳಬೇಡಿ
ಲಕ್ನೋ: ಗೋರಕ್ಷಣೆ ಹೆಸರಿನಲ್ಲಿ ಯಾರು ಕಾನೂನು ಕೈಗೆತ್ತಿಕೊಳ್ಳಬಾರದು ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಗೋ ಸಾಗಾಟ ನಡೆಯುತ್ತಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಬೇಕು. ಆದರೆ ಕಾನೂನುನ್ನು ಯಾರು ಕೈಗೆತ್ತಿಕೊಳ್ಳಬಾರದು, ನಾವು ಕಸಾಯಿಖಾನೆಗಳನ್ನು ಮುಚ್ಚುತ್ತಿಲ್ಲ, ಆದರೆ ನಿಯಮಗಳನ್ನುಪಾಲಿಸದ ಕಸಾಯಿಖಾನೆಗಳ ವಿರುದ್ಧ ಕ್ರಮ ಜರುಗಿಸುತ್ತೇವೆ ಎಂದು ಯೋಗಿ ಆದಿತ್ಯನಾಥ್ ಆಂಗ್ಲ ಸುದ್ದಿವಾಹಿನಿಗೆ ನೀಡಿರುವ ಸಂದರ್ಶನದ ವೇಳೆ ಹೇಳಿದ್ದಾರೆ.
ಇದೇ ವೇಳೆ ರಾಮಮಂದಿರ ನಿರ್ಮಾಣ ಕುರಿತು ಮಾತನಾಡಿರುವ ಅವರು, ಈ ವಿಷಯ ಸುಪ್ರಿಂ ಕೋರ್ಟ್ ನಲ್ಲಿದೆ ರಾಮಮಂದಿರ ವಿವಾದವನ್ನು ಉಭಯ ಸಮುದಾಯಗಳು ಮಾತುಕತೆ ಮೂಲಕ ಪರಿಹರಿಸಿಕೊಳ್ಳಬೇಕು. ಅದಕ್ಕಾಗಿಅಯೋಧ್ಯೆ ಜನರಲ್ಲಿ ಭಾತೃತ್ವದ ಭಾವನೆಯನ್ನು ಬೆಳೆಸಲು ನಾವು ಪ್ರಯತ್ನಿಸುತ್ತಿದ್ದೇವೆ ಎಂದಿದ್ದಾರೆ.
Comments