ಪೂಜಾರಿ ಅವರನ್ನು ಅವಹೇಳನ ಮಾಡಿಲ್ಲ- ರಮಾನಾಥ್ ರೈ

ಮಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಬಿ.ಜನಾರ್ದನ ಪೂಜಾರಿ ಅವರನ್ನು ಮದುವೆ ಸಮಾರಂಭ ಒಂದರಲ್ಲಿ ಅವರನ್ನು ಅವಹೇಳನ ಮಾಡಿದ್ದೇನೆ ಎಂಬ ಹರಿಕೃಷ್ಣಾ ಬಂಟ್ವಾಳ ಮಾಡಿರುವ ಆರೋಪಕ್ಕೆ ದಾಖಲೆಗಳಿಲ್ಲ. ಗಾಳಿಯಲ್ಲಿ ಗುದ್ದಿದಂತೆ ಮಾಡುವ ಆರೋಪಗಳಿಗೆ ಉತ್ತರ ನೀಡುವುದಿಲ್ಲ ಬಿ. ರಮಾನಾಥ್ ರೈ ಹೇಳಿದ್ದಾರೆ.
ನನ್ನ ಮೇಲೆ ಆಧಾರ ರಹಿತ ಆರೋಪ ಮಾಡಲಾಗುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ್ ರೈ ಹೇಳಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯನ್ನು ಸಂಘಟಿಸಲು ಮಂಗಳೂರಿನ ಹೊರವಲಯದ ಅಡ್ಯಾರ್ ಗಾರ್ಡನ್ ನಲ್ಲಿ ದಕ್ಷಿಣ ಕನ್ನಡ ಮತ್ತು ಕೊಡಗು ಕಾಂಗ್ರೆಸ್ ಚುನಾಯಿತ ಪ್ರತಿನಿಧಿಗಳು , ಸೋತ ಅಭ್ಯರ್ಥಿಗಳ ಸಮಾವೇಶ ನಡೆಯಲಿದೆ ಎಂದಿದ್ದಾರೆ.
ಜುಲೈ 7ರಮಧ್ಯಾಹ್ನ 3 ಗಂಟೆಗೆ ನಡೆಯುವ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ ಪರಮೇಶ್ವರ್, ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ , ಪ್ರದೇಶ ಕಾಂಗ್ರೆಸ್ ಉಸ್ತುವಾರಿ, ಎಐಸಿಸಿ ಪ್ರಧಆನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ ಮುಂತಾದವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
Comments