ಜೆಡಿಎಸ್ ಗೆ ಎಚ್. ವಿಶ್ವನಾಥ್ ಸೇರ್ಪಡೆ

ಬೆಂಗಳೂರು: ಮಾಜಿ ಸಚಿವ ಎಚ್. ವಿಶ್ವನಾಥ್ ಅವರು ಅಧಿಕೃತವಾಗಿ ಜೆಡಿಎಸ್ ಗೆ ಇವತ್ತು ಸೇರ್ಪಡೆಗೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಅಸಮಾಧಾನಗೊಂಡಿದ್ದ ಅವರು ಇತ್ತೀಚೆಗೆ ಕಾಂಗ್ರೆಸ್ ಸದಸತ್ವಕ್ಕೆ ರಾಜೀನಾಮೆ ನೀಡಿದ್ದರು.
ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಜೆ.ಪಿ ಭವನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಮತ್ತು ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜೆಡಿಎಸ್ ಗೆ ಸೇರ್ಪಡೆಗೊಂಡರು. ಇದಕ್ಕೂ ಮುನ್ನ ವಿಶ್ವನಾಥ್ ಬಸವನಗುಡಿಯ ದೊಡ್ಡ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ನಂತರ ಜೆಡಿಎಸ್ ಕಚೇರಿಗೆ ತೆರಳಿದ್ದರು.
Comments