ಇಂದು ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಫಲಿತಾಂಶ ಮಧ್ಯಾಹ್ನ 3 ಗಂಟೆಗೆ ಪ್ರಕಟವಾಗಲಿದೆ

ಬೆಂಗಳೂರು : ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರಿಗೆ ನಡೆದಿದ್ದ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಫಲಿತಾಂಶ ಪ್ರಕಟಿಸಿದ್ದಾರೆ. ಮಧ್ಯಾಹ್ನ 3 ಗಂಟೆಗೆ ವೆಬ್ಸೈಟ್ನಲ್ಲಿ ಫಲಿತಾಂಶ ಲಭ್ಯವಾಗುತ್ತದೆ. ಪರೀಕ್ಷೆ ಬರೆದವರು ವೆಬ್ಸೈಟಿಗೆ ಹೋಗಿ ಹಾಲ್ ಟಿಕೆಟ್ ನಂಬರ್ ಹಾಕಿ ಫಲಿತಾಂಶ ಪಡೆಯಬಹುದು.
http://sslc.kar.nic.in ಮತ್ತು http://karresults.nic.in ವೆಬ್ಸೈಟ ನಲ್ಲಿ ಪೂರಕ ಪರೀಕ್ಷೆಯ ಫಲಿತಾಂಶ ಲಭ್ಯವಾಗಲಿದೆ. ಇನ್ನು ರಾಜ್ಯದ ಎಲ್ಲ ಪ್ರೌಢಶಾಲೆಗಳಲ್ಲಿ ನಾಳೆ ಅಂದರೆ ಜುಲೈ 14ರಂದು ಬೆಳಿಗ್ಗೆ 10 ಗಂಟೆಗೆ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ.
Comments