ಪೆಟ್ರೋಲ್ ಬಂಕ್ ಮಾಲೀಕರೇ ಹುಷಾರ್ , ಸುಖಾಸುಮ್ನೆ ಪೆಟ್ರೋಲ್ ಬಂಕ್ ಬಂದ್ ಆದ್ರೆ ಕೇಸ್!
ಕೆಲಸಗಾರರೇ ಇನ್ಮೇಲೆ ಪದೇ ಪದೇ ಮುಷ್ಕರ ಮಾಡಿದರೆ ಅಥವಾ ಬಂಕ್ ಮುಚ್ಚುವ ದುಸ್ಸಾಹಸಕ್ಕೇ ಏನಾದ್ರೂ ಕೈ ಹಾಕಿದರೆ ಹುಷಾರ್..! ನಿಮ್ಮ ಮೇಲೆ ಕೇಸ್ ಜಡಿಯಲಾಗುತ್ತದೆ. ಹೀಗೆಂದು ಕಟ್ಟಪ್ಪಣೆ ಮಾಡಿರುವುದು ಮೈಸೂರು ಜಿಲ್ಲಾಧಿಕಾರಿ ರಂದೀಪ್.ಪೆಟ್ರೋಲ್ ಮತ್ತು ಡೀಸೆಲ್ ಬಂಕ್ ಮಾಲೀಕರು ಕಳೆದ ಜೂನ್ 16 ರಂದು ಮತ್ತು ಜುಲೈ 5 ರಂದು ಕಾನೂನು ಬಾಹಿರವಾಗಿ ಮುಷ್ಕರ ನಡೆಸಿದ್ದು, ಸಾರ್ವಜನಿಕರಿಗೆ ಪೆಟ್ರೋಲ್ ಮತ್ತು ಡೀಸೆಲ್ ಸರಬರಾಜಿನಲ್ಲಿ ತೊಂದರೆ ಆಗಿದೆ. ಮೈಸೂರು ಜಿಲ್ಲೆಯ ಪೆಟ್ರೋಲ್ ಮತ್ತು ಡೀಸೆಲ್ ವಿತರಕರು ಜುಲೈ 12 ರಂದು ಮತ್ತೆ ಮುಷ್ಕರ ನಡೆಸಿರುವುದಾಗಿ ತಿಳಿದು ಬಂದಿದೆ.
ಕೇಂದ್ರ ಸರ್ಕಾರದ ತೈಲ ಕಂಪನಿಗಳ ಅಧಿಕೃತ ಏಜೆನ್ಸಿಗಳಾಗಿರುವ ಪೆಟ್ರೋಲ್ ಮತ್ತು ಡೀಸೆಲ್ ವಿತರಕರು ಅನಧಿಕೃತ ಮತ್ತು ಕಾನೂನು ಬಾಹಿರ ಮುಷ್ಕರ ಮಾಡಿ ಅಗತ್ಯ ವಸ್ತುಗಳಾದ ಪೆಟ್ರೋಲಿಯಂ ಉತ್ಪನ್ನಗಳ ಸರಬರಾಜಿನಲ್ಲಿ ವ್ಯತ್ಯಯ ಉಂಟು ಮಾಡುವುದು ಅಗತ್ಯ ವಸ್ತುಗಳ ಕಾಯಿದೆ 1955 ಮತ್ತು ಕರ್ನಾಟಕ ಅಗತ್ಯ ಸೇವೆಗಳ ನಿರ್ವಾಹಣಾ ಕಾಯ್ದೆ 2013, ದಿ. ಮೋಟಾರ್ ಸ್ಪಿರಿಟ್ ಅಂಡ್ ಹೈ ಸ್ಪೀಡ್ ಡೀಸೆಲ್ (ರೆಗ್ಯುಲೇಸನ್ ಆಫ್ ಸಫ್ಲೈ, ಡಿಸ್ಟ್ರಿಬ್ಯೂಷನ್ ಅಂಡ್ ಪ್ರಿವೆನ್ಶನ್ ಆಫ್ ಮಾಲ್ ಪ್ರಾಕ್ಟೀಸ್ ಅರ್ಡರ್ 1998) ಮತ್ತು ಕರ್ನಾಟಕ ಅಗತ್ಯ ವಸ್ತುಗಳ (ಲೆಕ್ಕ ಪತ್ರ ನಿರ್ವಹಣೆ ದಾಸ್ತಾನು ಮತ್ತು ಬೆಲೆ ಪ್ರಕಟಣೆ) ಆದೇಶ 1981 ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿರುತ್ತದೆ
ಈ ಹಿನ್ನೆಲೆ ಮುಷ್ಕರ ಮಾಡಿ ಪೆಟ್ರೋಲಿಯಂ ಉತ್ಪನ್ನಗಳ ಸರಬರಾಜು ಸ್ಥಗಿತಗೊಳಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸುವುದು ಅನಿವಾರ್ಯವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ರಂದೀಪ್ ಡಿ. ಅವರು ತಿಳಿಸಿದರು..
Comments