ರೈತರ ಬೃಹತ್ ಸಮಾವೇಶ ಇಂದು
ನರಗುಂದ, ಕಳಸಾ-ಬಂಡೂರಿ, ಮಹದಾಯಿ ಯೋಜನೆ ಜಾರಿಗೆ ಆಗ್ರಹಿಸಿ ನಿರಂತರವಾಗಿ ನಡೆಯುತ್ತಿರುವ ಹೋರಾಟ ಧರಣಿ ಸತ್ಯಾಗ್ರಹ ಭಾನುವಾರ ಎರಡು ವರ್ಷ ಪೂರೈಸಿದೆ. ಇದರ ಅಂಗವಾಗಿ ಇಂದು ರೈತರ ಬೃಹತ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಮಾಡು ಇಲ್ಲವೇ ಮಡಿ ಎಂಬ ಧ್ಯೇಯದೊಂದಿಗೆ ಹೋರಾಟ ಮುಂದುವರಿಸುತ್ತೇವೆ. ಸಮಾವೇಶದಲ್ಲಿ ಸುಮಾರು ೨೦ ಸಾವಿರಕ್ಕೂ ಹೆಚ್ಚುಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದು ರೈತ ಸೇನಾ ರಾಜ್ಯ ಘಟಕದ ಅಧ್ಯಕ್ಷ ವೀರೇಶ ಸೊಬರದಮಠ ಹೇಳಿದರು.
ಸಮಾವೇಶದಲ್ಲಿ ಭಾಗವಹಿಸುವಂತೆ ೮೦೦ ಸಂಘಟನೆಗಳಿಗೆ ಪತ್ರ ಬರೆಯಲಾಗಿದೆ. ನಾಡಿನ ೧೪೦ ಮಠಾಧೀಶರಿಗೂ ಮನವಿ ಮಾಡಿಕೊಳ್ಳಲಾಗಿದೆಎಂದು ಅವರು ತಿಳಿಸಿದರು. ಯೋಜನೆ ಜಾರಿಗಾಗಿ ಆಗ್ರಹಿಸಿ ಕರೆ ನೀಡಿದ್ದ ರೋಣ ಬಂದ್ ಶನಿವಾರ ಯಶಸ್ವಿಯಾಗಿದೆ. ಗಜೇಂದ್ರ ಗಡದಲ್ಲಿಯೂ ರೈತರು ಪ್ರತಿಭಟನೆ ನಡೆಸಿದರು. ಹುಬ್ಬಳ್ಳಿ ತಾಲೂಕಿನ ಕುಸುಗಲ್ ನಲ್ಲಿ ರೈತರು ಸುಮಾರು ಒಂದು ತಾಸು ವಾಹನ ತಡೆದು ಪ್ರತಿಭಟನೆ ಮಾಡಿದರು.
Comments