ಮಲೆನಾಡಿನಲ್ಲಿ ಬಿರುಸುಗೊಂಡ ಮಳೆ, ಚಿಕ್ಕೋಡಿಯಲ್ಲಿ ಸೇತುವೆ ಮುಳುಗಡೆ
ಬೆಂಗಳೂರು: ಮುಂಗಾರು ಬಿರುಸುಗೊಂಡ ಹಿನ್ನಲೆಯಲ್ಲಿ ಮಲೆನಾಡು ಮತ್ತು ಘಟ್ಟ ಪ್ರದೇಶಗಳ ಪ್ರಮುಖ ನದಿಗಳ ನೀರಿನ ಮಟ್ಟ ಏರಿಕೆಯಾಗಿದೆ. ಪ್ರವಾಹ ಪರಿಸ್ಥಿತಿ ಎದುರಾಗಿದೆ.
ರಾಜ್ಯದ ಪ್ರಮುಖ ಜಲಾಶಯಗಳ ಮಟ್ಟವು ಏರಿಕೆಯಾಗಿದ್ದು, ಒಳಹರಿವಿನ ಪ್ರಮಾಣ ಹೆಚ್ಚಿದೆ. ಮಳೆ ಅವಘಡದಿಂದ ಚಿಕ್ಕಮಗಳೂರು ಜಿಲ್ಲೆಯ ಕಳಸದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಅದರಂತೆ ಉತ್ತರ ಕನ್ನಡ ಜಿಲ್ಲೆಯಲ್ಲೂ ಇಬ್ಬರು ಸಾವನ್ನಪ್ಪಿದ್ದಾರೆ.
ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ ಆಗುತ್ತಿರುವುದರಿಂದ ಕೃಷ್ಣಾ ಹಾಗೂ ಅದರ ಉಪನದಿಗಳಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ಚಿಕ್ಕೋಡಿ ತಾಲೂಕಿನ ನಾಲ್ಕು ಸೇತುವೆಗಳು ಮುಳುಗಡೆ ಯಾಗಿವೆ. ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ರಾತ್ರಿಯಿಡೀ ಸುರಿದ ಮಳೆ ಯಿಂದ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಹಳ್ಳ, ಕೊಳ್ಳಗಳು ತುಂಬಿ ಹರಿಯುತ್ತಿವೆ.
Comments