348 ಹುದ್ದೆಗಳಿಗೆ ಕೆಪಿಸಿಎಲ್ ಅರ್ಜಿ ಆಹ್ವಾನ
ಬೆಂಗಳೂರು : ಕರ್ನಾಟಕ ಪವರ್ ಕಾರ್ಪೊರೇಶನ್ ಲಿಮಿಟೆಡ್ (ಕೆಪಿಸಿಎಲ್)ನಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಇಂಜಿನಿಯರ್ ಹಾಗೂ ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
183 ಅಸಿಸ್ಟೆಂಟ್ ಇಂಜಿನಿಯರ್ ಮತ್ತು 165 ಜೂನಿಯರ್ ಇಂಜಿನಿಯರ್ ಒಟ್ಟು 348 ಹುದ್ದೆಗಳಿಗೆ ಅರ್ಜಿ ಕರೆಯಲಾಗಿದ್ದು, ಅರ್ಹ ಹಾಗೂ ಆಸಕ್ತರು ದಿನಾಂಕ 18 ಆಗಸ್ಟ್, 2017ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.
- ಹುದ್ದೆ: ಅಸಿಸ್ಟೆಂಟ್ ಇಂಜಿನಿಯರ್ (183)
- ವಿದ್ಯಾರ್ಹತೆ: ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಿವಿಲ್ ಇಂಜಿನಿಯರಿಂಗ್, ಮೆಕ್ಯಾನಿಕಲ್ ಇಂಜಿನಿಯರಿಂಗ್ ಪೂರ್ಣಗೊಳಿಸಿರಬೇಕು.
- ವೇತನ ಶ್ರೇಣಿ: 19055 ರಿಂದ 43995 ರು. ತಿಂಗಳಿಗೆ.
- ವಯೋಮಿತಿ: ಆಗಸ್ಟ್ 18, 2017ಕ್ಕೆ ಅನ್ವಯವಾಗುವಂತೆ 18ರಿಂದ 35 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.
- ಹುದ್ದೆ: ಜೂನಿಯರ್ ಇಂಜಿನಿಯರ್ (165)
- ವಿದ್ಯಾರ್ಹತೆ: ಜೂನಿಯರ್ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಿವಿಲ್ ಇಂಜಿನಿಯರಿಂಗ್, ಮೆಕ್ಯಾನಿಕಲ್ ಇಂಜಿನಿಯರಿಂಗ್ ಹಾಗೂ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ನಲ್ಲಿ ಡಿಗ್ರಿ ಪೂರ್ಣಗೊಳಿಸಿರಬೇಕು.
- ವೇತನ ಶ್ರೇಣಿ: 14365 ರಿಂದ 40785 ರು. ತಿಂಗಳಿಗೆ.
- ವಯೋಮಿತಿ: ಆಗಸ್ಟ್ 18, 2017ಕ್ಕೆ ಅನ್ವಯವಾಗುವಂತೆ 18ರಿಂದ 35 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.
- ಆಯ್ಕೆ ವಿಧಾನ: ಮೇಲಿನ ಎರಡು ಹುದ್ದೆಗಳಿಗೆ ಲಿಖಿತ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಇನ್ನು ಇದರ ಬಗ್ಗೆ ಹೆಚ್ಚಿನ ಮಾಹಿತಿ ಬೇಕಿದ್ದಲ್ಲಿ ಇಲ್ಲಿ ಕ್ಲಿಕ್ಕಿಸಿ.
Comments