ಸೆ.21ರಿಂದ ವಿಶ್ವವಿಖ್ಯಾತ ಮೈಸೂರು ದಸರಾ

ಬೆಂಗಳೂರು:ಸೆಪ್ಟೆಂಬರ್ 21 ರಿಂದ 30ರವರೆಗೆ ಮೈಸೂರು ದಸರಾ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದ್ದು, ಸರಳ ಹಾಗೂ ವಿಜೃಂಭಣೆಯಿಂದ ದಸರಾ ಆಚರಣೆಗೆ ತೀರ್ಮಾನಿಸಲಾಗಿದೆ.
ದಸರಾ ಮಹೋತ್ಸವಕ್ಕೆ ರಾಜ್ಯ ಸರ್ಕಾರ ಒಟ್ಟು 15 ಕೋಟಿ ಅನುದಾನ ನೀಡಲು ನಿರ್ಧರಿಸಿದ್ದು, ಸೆಪ್ಟೆಂಬರ್ 21ರಂದು ಬೆಳಗ್ಗೆ 9.15ಕ್ಕೆ ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆ ನೆರವೇರಲಿದೆ.
ಸೆ.21ರಂದು ಬೆಳಗ್ಗೆ ದಸರಾ ಉದ್ಘಾಟನೆಯಾಗಲಿದ್ದು,ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ಇನ್ನಿತರ ಕಾರ್ಯಕ್ರಮಗಳಿಗೂ ಅಂದೇಚಾಲನೆ ನೀಡಲಾಗುವುದು. ಅಂತೆಯೇ ನವರಾತ್ರಿಯು ಸೆ.29ರಂದು ಅಂತ್ಯಗೊಳ್ಳುತ್ತದೆ. ವಿಜಯ ದಶಮಿ ಅಂಗವಾಗಿ ಸೆ.30ರಂದುಮಧ್ಯಾಹ್ನ 1.15 ಕ್ಕೆ ನಂದಿ ಪೂಜೆ, 3.15ಕ್ಕೆಜಂಬೂ ಸವಾರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಉತ್ಸವಕ್ಕೆ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
Comments