ಆ.4 ರಂದು ರಾಯಚೂರಕ್ಕೆ ರಾಹುಲ್ ಭೇಟಿ ರದ್ದು
ರಾಯಚೂರ: ಆಗಸ್ಟ್ 4 ರಂದು ರಾಯಚೂರಿಕ್ಕೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಭೇಟಿ ರದ್ದಾಗಿದೆ. ರಾಯಚೂರಲ್ಲಿ ಬೃಹತ್ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸಲಾಗಿದೆ. ಸಮಾವೇಶದಲ್ಲಿ ರಾಹುಲ್ ಗಾಂಧಿ ಪಾಲ್ಗೊಳ್ಳಬೇಕಿತ್ತು. ಆದರೆ ಆಗಸ್ಟ್ ನಲ್ಲಿ ರಾಜ್ಯಸಭೆ ಹಾಗೂ ಉಪರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಇದರಲ್ಲಿ ರಾಹುಲ್ ಗಾಂಧಿ ಬ್ಯೂಸಿಯಾಗಿದ್ದಾರೆ.ರಾಜ್ಯಕ್ಕೆ ಬರಲು ಸಾಧ್ಯವಾಗುತ್ತಿಲ್ಲ, ಮಾಜಿ ಸಿಎಂ ಧರ್ಮಸಿಂಗ್ ನಿಧನದಿಂದಾಗಿ ಸಮಾವೇಶವನ್ನು ಮುಂದೂಡಲಾಗಿದೆ. ಧರ್ಮಸಿಂಗ್ ಹೈದ್ರಾಬಾದ್ ಕರ್ನಾಟಕದ ಪ್ರಶ್ನಾತೀತ ನಾಯಕರಾಗಿದ್ದರು. ಅವರಿಗೆ ಗೌರವ ನೀಡುವ ಉದ್ದೇಶದಿಂದಾಗಿ ಸಮಾವೇಶವನ್ನು ಮುಂದುಡಲಾಗಿದೆ ಎಂದು ಹೇಳಲಾಗುತ್ತಿದೆ.
Comments