ಮಾಧ್ಯಮಗಳಿಗೆ ಡಿ ಕೆ ಸುರೇಶ್ ಎಚ್ಚರಿಕೆ

ಇಂಧನ ಸಚಿವ ಡಿ ಕೆ ಶಿವಕುಮಾರ್ ನಿವಾಸಗಳ ಮೇಲೆ ಆದಾಯ ತೆರಿಗೆ ದಾಳಿ ವಿಚಾರದಲ್ಲಿ ಸುಳ್ಳು ಸುದ್ದಿ ಬಿತ್ತರಿಸುತ್ತಿರುವ ಮಾಧ್ಯಮಗಳ ಮೇಲೆ ಮಾನನಷ್ಟ ಮೊಕದ್ದಮೆ ಹೂಡಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಸಂಸದ ಮತ್ತು ಡಿಕೆಶಿ ಸಹೋದರ ಡಿ ಕೆ ಸುರೇಶ್ ಎಚ್ಚರಿಕೆ ನೀಡಿದ್ದಾರೆ.
ಮಾಧ್ಯಮಗಳು ಬಿತ್ತರಿಸುತ್ತಿರುವ ಸುದ್ದಿಗಳು ಆಧಾರರಹಿತವಾಗಿದ್ದು, ಡಿ ಕೆ ಶಿವಕುಮಾರ್ ಅವರ ತೇಜೋವಧೆ ಮಾಡುತ್ತಿವೆ. ಆದಾಯ ತೆರಿಗೆ ಅಧಿಕಾರಿಗಳು ದಾಳಿಯ ಬಗ್ಗೆ ಇದುವರೆಗೆ ಯಾವುದೇ ವಿಷಯವನ್ನು ಬಹಿರಂಗ ಪಡಿಸಲಿಲ್ಲ. ಆದಾಗ್ಯೂ, ಮಾಧ್ಯಮಗಳು ಸುಳ್ಳು ಸುದ್ದಿ ಪ್ರಸಾರ ಮಾಡುತ್ತಿವೆ.
ನಮ್ಮ ಹಣಕಾಸಿನ ವ್ಯವಹಾರ ಪಾರದರ್ಶಕವಾಗಿದ್ದು, ಆದಾಯ ತೆರಿಗೆ ದಾಳಿ ಮುಗಿದ ಮೇಲೆ ಎಲ್ಲಾ ಸತ್ಯ ಹೊರಬರಲಿದೆ. ನಮ್ಮ ವಿರುದ್ದ ಸುಳ್ಳು ಸುದ್ದಿ ಪ್ರಸಾರ ಮಾಡಲು ಕೆಲವರ ಷಡ್ಯಂತ್ರವೇ ಕಾರಣ. ಇಂತಹ ಮಾಧ್ಯಮಗಳ ಮೇಲೆ ಮಾನನಷ್ಟ ಮೊಕದ್ದಮೆ ಹೂಡುತ್ತೇವೆ ಎಂದು ಡಿ ಕೆ ಸುರೇಶ್ ತಿಳಿಸಿದ್ದಾರೆ.
Comments