ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗುರುವಾರ ಮತ್ತೆ ಐಟಿ ದಾಳಿ ನಡೆದಿದೆ.

ಏಕಕಾಲದಲ್ಲಿ 10ಕ್ಕೂ ಹೆಚ್ಚು ಕಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇಂಧನ ಸಚಿವ ಡಿಕೆ ಶಿವಕುಮಾರ್ ಅವರ ನಿವಾಸ ಹಾಗೂ ಅವರ ಆಪ್ತರಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ ಬೆನ್ನಲ್ಲೇ ಇಂದು ಗುರುವಾರ ಬೆಳಗ್ಗೆಯಿಂದಲೇ ಬೆಂಗಳೂರಿನ ವಿವಿಧೆಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ.ಉದ್ಯಮಿಗಳು ಕೆಲ ಬಿಲ್ಡರ್ಗಳ ನಿವಾಸ , ಕಚೇರಿಗಳಲ್ಲಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಆದಾಯ ತೆರಿಗೆ ಇಲಾಖೆ ಮೂಲಗಳು ತಿಳಿಸಿವೆ.
Comments