ವೋಟರ್ ಐಡಿಗೂ ಶೀಘ್ರ ಆಧಾರ್ ಲಿಂಕ್

ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಲು ಕೇಂದ್ರ ಚುನಾವಣಾ ಆಯೋಗ ಚಿಂತನೆ ನಡೆಸಿದೆ. ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವ ಪಿ.ಪಿ. ಚೌಧರಿ ಸಂಸತ್ತಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಈ ಸಂಬಂಧ ಅನುಮತಿ ಕೋರಿ ಕೇಂದ್ರ ಚುನಾವಣಾ ಆಯೋಗ ಸುಪ್ರೀಂ ಕೋರ್ಟ್‌ಗೂ ಅರ್ಜಿ ಸಲ್ಲಿಸಿದೆ. ಸೂಕ್ತ ಸಮಯದಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.ಸರಕಾರ ಈಗಾಗಲೇ ಪ್ಯಾನ್ ಕಾರ್ಡ್, ಬ್ಯಾಂಕ್ ಖಾತೆ, ಎಲ್‌ಪಿಜಿ ಸಂಪರ್ಕ ಸಂಖ್ಯೆ ಸೇರಿದಂತೆ ಹಲವು ಸೇವೆಗಳಿಗೆ ಆಧಾರ್ ಲಿಂಕ್ ಕಡ್ಡಾಯಗೊಳಿಸಿದೆ.
Comments