ಅಸ್ಸಾಂನಲ್ಲಿ ಪ್ರವಾಹದ ಅಬ್ಬರ
ಅಸ್ಸಾಂ: ಅಸ್ಸಾಂನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಈಶಾನ್ಯ ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಅಸ್ಸಾಂ, ತ್ರಿಪುರಾ, ಮೇಘಾಲಯ ಅರುಣಾಚಲ ಪ್ರದೇಶದಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಹವಾಮಾನ ಇಲಾಖೆ ಇಲ್ಲಿ ರವಿವಾರರೆಡ್ ಅಲರ್ಟ್ ಘೋಷಿಸಿತ್ತು. ಬ್ರಹ್ಮಪುತ್ರ ನದಿಯ ನೀರಿನ ಅಪಾಯದ ಮಟ್ಟ ಮೀರಿದ್ದು, ಜನರ ನಿದ್ದೆ ಗೆಡಿಸಿದೆ. ಇಲ್ಲಿನ 9 ನದಿಗಳು ಉಕ್ಕಿ ಹರಿಯುತ್ತಿವೆ.
ಅಸ್ಸಾಂನಲ್ಲಿ 19 ಜಿಲ್ಲೆಗಳು ಪ್ರವಾಹ ಪೀಡಿತವಾಗಿದ್ದು, ಶನಿವಾರ ನಾಲ್ವರು ಮೃತಪಟ್ಟಿದ್ದಾರೆ. ಸುಮಾರು 63 ಸಾವಿರ ಮಂದಿಯನ್ನು 268 ಶಿಬಿರಗಳಿಗೆ ಸ್ಥಳಾಂತರಿಸಲಾಗಿದ್ದಪ, 1,750 ಗ್ರಾಮಗಳು ಹಾಗೂ 1 ಲಕ್ಷ ಹೆಕ್ಟೇರುನಷ್ಟು ಕೃಷಿ ಭೂಮಿ ಮುಳುಗಡೆಯಾಗಿವೆ ಎಂದು ಅಸ್ಸಾಂ ವಿಪತ್ತು ನಿರ್ವಹಣಾ ಪ್ರಾಧಿಕಾರ ಮಾಹಿತಿ ನೀಡಿದೆ. ರಾಷ್ಟ್ರೀಯ ವಿಪತ್ತು ಕ್ರಿಯಾ ಪಡೆ ರಾಜ್ಯಾದ್ಯಂತ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ. ತುರ್ತು ರಕ್ಷಣಾ ಕಾರ್ಯಕ್ಕೆಂದು ಸೇನೆಯನ್ನು ಸನ್ನದ್ಧ ಸ್ಥಿತಿಯಲ್ಲಿ ಇಡಲಾಗಿದೆ.
Comments