ಮಹಾದಾಯಿ ನದಿ ನೀರು ಹಂಚಿಕೆ: ರಾಜ್ಯ ಬಿಜೆಪಿ ನಾಯಕರಿಂದ ಗೋವಾ ಸಿಎಂ ಮನವೊಲಿಕೆ

ಮಹಾದಾಯಿ ನದಿ ನೀರಿನ ಹಂಚಿಕೆ ಸಂಬಂಧ ಗೋವಾ ಸಿಎಂ ಮನೋಹರ್ ಪರಿಕ್ಕರ್ ಅವರ ಮನವೊಲಿಸಲು ರಾಜ್ಯ ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ.
ಮಹದಾಯಿ ಮತ್ತು ಕಾವೇರಿ ನೀರು ವಿವಾದ ಸಂಬಂಧ ಕರೆದಿದ್ದ ಸರ್ವ ಪಕ್ಷ ಸಭೆಯ ನಂತರ ಮಾತನಾಡಿದ ಸಿಎಂ ಸಿದ್ದರಾಮಯ್ಯ ಆ.28 ರಂದು ಗೋವಾ ವಿಧಾನಸಭೆ ಉಪಚುನಾವಣೆಯ ನಂತರ ಯಡಿಯೂರಪ್ಪ ನೇತೃತ್ವದಲ್ಲಿ ಗೋವಾಕ್ಕೆ ತೆರಳಿ ಅಲ್ಲಿನ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರೊಂದಿಗೆ ಮಹದಾಯಿ ಸಂಬಂಧ ಮಾತುಕತೆ ನಡೆಸುತ್ತಾರೆ ಎಂದು ತಿಳಿಸಿದರು.ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಸಭೆಯಲ್ಲಿ ಪ್ರಧಾನಿ ಮಧ್ಯಸ್ಥಿಕೆಗೆ ಆಗ್ರಹಿಸಲಾಗಿದೆ. ಆದರೆ ಎರಡೂ ರಾಜ್ಯಗಳು ಸೇರಿ ಸೌಹಾರ್ದಯುತ ಪರಿಹಾರಕ್ಕೆ ಪ್ರಯತ್ನ ನಡೆಸುವುದಾಗಿ ಹೇಳಿದ್ದಾರೆ.
ಬಿಜೆಪಿ-ಕಾಂಗ್ರೆಸ್ ಮುಖಂಡರು ಹಳೆಯ ವಿಚಾರಕ್ಕೆ ಅಂಟಿಕೊಂಡಿದ್ದರು. ಗೋವಾ ಕಾಂಗ್ರೆಸ್ ವಿಪಕ್ಷ ನಾಯಕರನ್ನು ಒಪ್ಪಿಸಿ ನಾವು ಸಿಎಂ ಜೊತೆ ಚರ್ಚೆ ನಡೆಸುತ್ತೇವೆ ಬಿಜೆಪಿ ನಾಯಕರು ಹೇಳಿದರು. ಬಿಜೆಪಿ ನಾಯಕರಿಗೆ ಬಿಸಿ ಮುಟ್ಟಿಸಿದ ಸಿಎಂ ಸಿದ್ದರಾಮಯ್ಯ, ಗೋವಾ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿಗಳಿಗೆ ನಾಲ್ಕು ಬಾರಿ ಪತ್ರ ಬರೆದಿದ್ದೇನೆ. ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಲು ಮನವಿ ಮಾಡಿದ್ದೇನೆ. ಪ್ರಧಾನಿ ಬಳಿ ನಿಯೋಗ ತೆರಳಿದ್ದೇವೆ ಎಂದು ಸಮಜಾಯಿಷಿ ನೀಡಿದರು.
Comments