ಜಾಹೀರಾತಿನಲ್ಲಿ ಸಿಎಂ ಸಿದ್ದರಾಮಯ್ಯ!? :ಎಚ್ ಡಿಕೆ
ಬೆಂಗಳೂರು: ರಾಜಕೀಯ ನಾಯಕರೆಂದರೆ ಅಲ್ಲಿ ಪ್ರಚಾರ, ಜಾಹೀರಾತು ಇದ್ದೇ ಇರುತ್ತೆ. ರಾಜಕೀಯ ಪಕ್ಷಗಳು ತಮ್ಮ ಸಾಧನೆಗಳನ್ನು ಹೇಳಲು, ಜನರಿಗೆ ತಲುಪಿಸಲು ಸಾಮಾಜಿಕ ಮಾಧ್ಯಮಗಳನ್ನು ಬಳಸಿಕೊಳ್ಳುತ್ತವೆ. ಈಗ ಎಚ್.ಡಿ ಕುಮಾರಸ್ವಾಮಿ ಅವರು ಜಾಹೀರಾತಿನ ಬಗ್ಗೆ ವಾಕ್ ಸಮರ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯನವರ ಜಾಹೀರಾತು ಉದ್ದೇಶಿಸಿ ಹೇಳಿಕೆ ನೀಡಿದ್ದಾರೆ.
ಜಾಹೀರಾತಿಗಷ್ಟೇ ಸಿಎಂ ಸಿದ್ದರಾಮಯ್ಯ ಸೀಮಿತವಾಗಿದ್ದಾರೆ. ಪ್ರಚಾರ ಪಡೆಯುವುದಷ್ಟೇ ಸಿಎಂ ಅವರಿಗೆ ಬೇಕು, ಯಾವುದೇ ಸಾಧನೆ ಮಾಡದಿದ್ದರೂ ಸಿಎಂ ಸಿದ್ದರಾಮಯ್ಯ ಕೇವಲ ಜಾಹೀರಾತಿನಲ್ಲೇ ಕಾಣಿಸಿಕೊಳ್ಳುತ್ತಾರೆ ಎಂದು ಎಚ್.ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಬೆಂಗಳೂರಿಗೆ ನೀಡಿದ ಕೊಡುಗೆ ಏನು? ಅವರ ಸಾಧನೆಗಳು ಕೇವಲ ಜಾಹೀರಾತಿಗೆ ಮಾತ್ರ ಸೀಮಿತವಾಗಿವೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಎಂದು ಲೇವಡಿ ಮಾಡಿದ್ದಾರೆ. ಶಾಸಕರು ಪಕ್ಷ ಬಿಟ್ಟು ಹೋಗುವ ವಿಚಾರ ಕುರಿತಂತೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ, ನಮ್ಮ ಪಕ್ಷದ ಶಾಸಕರ ಮೇಲೆ ನನಗೆ ವಿಶ್ವಾಸವಿದೆ. ಯಾರೂ ಪಕ್ಷ ಬಿಟ್ಟು ಹೋಗುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Comments