ಮೊದಲು ಎಚ್ಚರಿಕೆ.. ನಂತರ ಬುಲೆಟ್: ರೋಹ್ಟಕ್ ಪೊಲೀಸ್ ವರಿಷ್ಠಾಧಿಕಾರಿ ಎಚ್ಚರಿಕೆ!

ಅತ್ಯಾಚಾರಿ ಬಾಬಾಗೆ ಸೋಮವಾರ ಶಿಕ್ಷೆ ಪ್ರಮಾಣ ಪ್ರಕಟವಾಗುತ್ತಿರುವ ಹಿನ್ನಲೆಯಲ್ಲಿ ಹಿಂಸಾಚಾರಿಗಳಿಗೆ ರೋಹ್ಟಕ್ ಪೊಲೀಸ್ ವರಿಷ್ಠಾಧಿಕಾರಿ ಎಚ್ಚರಿಕೆ ನೀಡಿದ್ದು, ಮಿತಿ ಮೀರಿದರೆ ಗುಂಡಿನ ದಾಳಿ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ
ಈ ಬಗ್ಗೆ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರೋಹ್ಟಕ್ ಪೊಲೀಸ್ ಉಪಾಯುಕ್ತ ಅತುಲ್ ಕುಮಾರ್ ಅವರು, ಹಿಂಸಾಚಾರಕ್ಕಿಳಿಯುವ ದುಷ್ಕರ್ಮಿಗಳಿಗೆ ಮೊದಲು ಎಚ್ಚರಿಕೆ ನೀಡಿ. ಆಗಲೂ ಮಿತಿ ಮೀರಿ ವರ್ತಿಸಿದರೆ ಬಳಿಕ ಬುಲೆಟ್ ಗಲ ಮೂಲಕ ಉತ್ತರಿಸಿ ಎಂದು ಭದ್ರತಾ ಪಡೆಗಳಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ರೋಹ್ಟಕ್ ನ ಸುನಾರಿಯಾ ಕೇಂದ್ರ ಕಾರಾಗೃಹದಲ್ಲಿ ಇಂದು ಅತ್ಯಾಚಾರಿ ಬಾಬಾ ಗುರ್ಮಿತ್ ರಾಮ್ ರಹೀಮ್ ಸಿಂಗ್ ಗೆ ಶಿಕ್ಷೆ ಪ್ರಮಾಣ ಘೋಷಣೆ ಮಾಡಲಿದ್ದು, ಈ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕ ಘಟನೆ ನಡೆಯದಂತೆ ಭಾರಿ ಭದ್ರತೆ ಒದಗಿಸಲಾಗಿದೆ. ಹೀಗಿದ್ದೂ ದುಷ್ಕರ್ಮಿಗಳು ಹಿಂಸಾಚಾರಕ್ಕೆ ಇಳಿದರೆ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ.
Comments