ಲಕ್ಷ್ಮಿ ಹೆಬ್ಬಾಳ್ಕರ್ ಹೊತ್ತಿಸಿದ ಕಿಡಿ : ಮಹಾರಾಷ್ಟ್ರ ಪರ ಹೇಳಿಕೆಗೆ ಕನ್ನಡಿಗರ ಆಕ್ರೋಶ

ಕರ್ನಾಟಕ -ಮಹಾರಾಷ್ಟ್ರ ನಡುವಿನ ಗಡಿ ವಿವಾದ ಸುಪ್ರೀಂ ಕೋರ್ಟ್‌ನಲ್ಲಿದ್ದು, ಬೆಳಗಾವಿ, ಮಹಾರಾಷ್ಟ್ರಕ್ಕೆ ಸೇರಬೇಕೆಂಬ ತೀರ್ಪು ಬಂದರೆ, ನಾನೇ ಮುಂದೆ ನಿಂತು ಮಹಾರಾಷ್ಟ್ರದ ಧ್ವಜ ಹಿಡಿದು ಜೈಕಾರ ಹಾಕುತ್ತೇನೆ’ ಎಂದು ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಲಕ್ಷ್ಮಿಹೆಬ್ಬಾಳ್ಕರ್ ವಿವಾದದ ಕಿಡಿ ಹಚ್ಚಿದ್ದಾರೆ.
ಬೆಳಗಾವಿ ಗಡಿವಿವಾದ ಸುಪ್ರೀಂಕೋರ್ಟಿನಲ್ಲಿದೆ. ಈ ಸಂಬಂಧ ತೀರ್ಪು ಬಂದರೆ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಲಿದೆ. ಆಗ ನಾವೆಲ್ಲ ಒಪ್ಪಿಕೊಳ್ಳಬೇಕಾಗುತ್ತದೆ. ಆದರೆ, ಅಂತಹ ತೀರ್ಪು ಸದ್ಯಕ್ಕೆ ಬರುವುದಿಲ್ಲ ಎಂದಿದ್ದೇನೆಯೇ ಹೊರತು ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಎಂದರು ಲಕ್ಷ್ಮಿ ಹೆಬ್ಬಾಳ್ಕರ್ , ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ
“ಮಹಾರಾಷ್ಟ್ರಕ್ಕೆ ಜೈ” ಎನ್ನುವ ಮೂಲಕ ವಿವಾದದ ಬೆಂಕಿಗೆ ತುಪ್ಪ ಸುರಿದಿರುವ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ ’ಕೈ’ಪಾಳಯದಲ್ಲಿ ಅಸಮಾಧಾನ ಅತೃಪ್ತಿಗೂ ಕಾರಣವಾದ ಬೆನ್ನಲ್ಲೇ ಪ್ರತಿಪಕ್ಷ ಬಿಜೆಪಿ ರಾಜ್ಯಾದ್ಯಂತ ಹೋರಾಟ ಮಾಡಲು ನಿರ್ಧರಿಸಿದೆ.
Comments