ಬಳ್ಳಾರಿ ಭೇಟಿ ಷರತ್ತು ಸಡಿಲಕ್ಕೆ ರೆಡ್ಡಿ ಮನವಿ ಸುಪ್ರೀಂ ವಜಾ

ಜಾಮೀನಿಗೆ ನೀಡಿರುವ ಷರತ್ತುಗಳನ್ನು ಸಡಿಲಿಸುವಂತೆ ಕೋರಿ ಮಾಜಿ ಸಚಿವ ಜಿ. ಜನಾರ್ಧನ್ ರೆಡ್ಡಿ, ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಗೊಳಿಸಿದೆ.
ಅಕ್ರಮ ಗಣಿಗಾರಿಕೆ ಆರೋಪದಡಿ ಜೈಲು ಪಾಲಾಗಿದ್ದ ಜನಾರ್ಧನ್ ರೆಡ್ಡಿಯವರಿಗೆ ಜಾಮೀನು ನೀಡುವ ಸಂದರ್ಭದಲ್ಲಿ ತವರು ಜಿಲ್ಲೆ ಬಳ್ಳಾರಿಗೆ ತೆರಳದಂತೆ ಷರತ್ತು ವಿಧಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಷರತ್ತುಗಳನ್ನು ಸಡಿಲಗೊಳಿಸುವಂತೆ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಗೊಳಿಸುವುದು ಮತ್ತೆ ಹಿನ್ನಡೆ ಅನುಭವಿಸುವಂತಾಗಿದೆ.
ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಉದ್ದೇಶದಿಂದ ಬಳ್ಳಾರಿಗೆ ತೆರಳಲು ಅವಕಾಶ ಮಾಡಿಕೊಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.ಸುಪ್ರೀಂ ಕೋರ್ಟ್ ಅರ್ಜಿ ವಜಾ ಗೊಳಿಸುವುದರಿಂದ ಜನಾರ್ಧನ್ ರೆಡ್ಡಿ ಬಳ್ಳಾರಿಗೆ ತೆರಳುವುದು ಕಷ್ಟ ಸಾಧ್ಯವಾಗಿದೆ.
Comments